ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆನರಾ ವಿದ್ಯಾ ಜ್ಯೋತಿ ವಿದ್ಯಾರ್ಥಿವೇತನ ವಿತರಣೆ

Last Updated 17 ಸೆಪ್ಟೆಂಬರ್ 2021, 2:04 IST
ಅಕ್ಷರ ಗಾತ್ರ

ಗದಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯಕ್ಕೆ ಸೇರಿದ ಹೆಣ್ಣು ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸಲು ಕೆನರಾ ಬ್ಯಾಂಕ್ ‘ಕೆನರಾ ವಿದ್ಯಾ ಜ್ಯೋತಿ’ ಯೋಜನೆಯ ಮೂಲಕ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುತ್ತಿದೆ ಎಂದು ಕೆನರಾ ಬ್ಯಾಂಕ್ ಮುಖ್ಯ ಪ್ರಬಂಧಕ ಹನುಮಪ್ಪ ನಿಟ್ಯಾಲಿ ಹೇಳಿದರು.

ಅವರು ಗುರುವಾರ ಎಸ್.ಎಂ.ಕೃಷ್ಣಾ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು.

‘ಹೆಣ್ಣು ಮಕ್ಕಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಬ್ಯಾಂಕ್‌ ಅವರ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿದೆ. ಸಾಮಾನ್ಯ ಜ್ಞಾನದೊಂದಿಗೆ ಶಿಕ್ಷಣದ ಮೂಲಕ ತಮ್ಮ ಜೀವನದ ಅಡಿಪಾಯವನ್ನು ನಿರ್ಮಿಸಲು ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ
ಮಾಡಬೇಕು’ ಎಂದು ಸಲಹೆ ನೀಡಿದರು.

ಬ್ಯಾಂಕ್‌ನ ಪ್ರಬಂಧಕ ಹರೀಶ ಮರಿಗೌಡ್ರ, ಬ್ಯಾಂಕ್‍ನಲ್ಲಿ ಲಭ್ಯವಿರುವ ಶಿಕ್ಷಣ ಯೋಜನೆಗಳು, ಗೃಹ ಸಾಲ ಇತರೆ ಸೇವೆಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಮಾಹಿತಿ ನೀಡಿದರು.

ಮುಖ್ಯ ಶಿಕ್ಷಕ ಹಣಮಂತಪ್ಪ, ಬಸವರಾಜ ಕಡೇಮನಿ, ಶಿಕ್ಷಕ ವಿವೇಕಾನಂದಗೌಡ ಪಾಟೀಲ, ಮಂಜುನಾಥ ಮೆಣಸಿನಕಾಯಿ ಮತ್ತು ಶಾಲೆಯ ಶಿಕ್ಷಕವೃಂದ ಹಾಗೂ ಬ್ಯಾಂಕ್‌ನ ಸಿಬ್ಬಂದಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT