ಬುಧವಾರ, ಜೂನ್ 29, 2022
27 °C

ಕಾರು ಅಪಘಾತ: ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರೋಣ: ಪಟ್ಟಣದ ಹೊರವಲಯದಲ್ಲಿರುವ ಬಸ್ ಡಿಪೋ ಸಮೀಪದಲ್ಲಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಗದಗ ನಗರದ ದರ್ಶನ್ ರಾಜ್ ಪುರೋಹಿತ್ (22), ಶೌಖತ್ ಅಲಿ ಖಾನ್ (23), ಮೈಪೂಸ್ ಆಲಂ (22) ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಮುಲ್ಲಾ ಅವರಿಗೆ ರೋಣ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗದಗ ನಗರದಿಂದ ಸ್ನೇಹಿತರೊಂದಿಗೆ ರೋಣಕ್ಕೆ ಬಂದಿದ್ದ ನಾಲ್ವರು ಯುವಕರು ವಾಪಸ್‌ ಊರಿಗೆ ಹೋಗುವಾಗ ಈ ಘಟನೆ ನಡೆದಿದೆ.

ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಈ ವೇಳೆ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸ್ಥಳೀಯರು ಹಾಗೂ ರಸ್ತೆ ಬದಿ ಇದ್ದ ಸಾರ್ವಜನಿಕರು ಕಾರ್‌ನಲ್ಲೇ ಮೃತಪಟ್ಟವರು ಹಾಗೂ ಗಾಯಗೊಂಡಿಡ್ಡ ಯುವಕನನ್ನು ಹೊರಕ್ಕೆಳೆದು ತೆಗೆದಿದ್ದಾರೆ. ದೇಹಗಳನ್ನು ಹೊರತೆಗೆದ ಕೂಡಲೇ ಡೀಸೆಲ್ ಸೋರಿಕೆಯಾಗಿ ಕಾರ್‌ನಲ್ಲಿ ಏಕಾಏಕಿ ಬೆಂಕಿ ಹತ್ತಿಕೊಂಡು, ಭಾಗಶಃ ಕಾರು ಸುಟ್ಟುಹೋಗಿದೆ.

ವಿಷಯ ತಿಳಿದ ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದವರು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು