ಶುಕ್ರವಾರ, ಮೇ 14, 2021
27 °C

ಗದಗ: ಕಾರು, ಬಸ್‌ ಡಿಕ್ಕಿಯಾಗಿ ಕಾರು ಚಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ರೋಣ ಹೆದ್ದಾರಿ ನಡುವೆ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರು ಚಲಾಯಿಸುತ್ತಿದ್ದ ಕಳಕಪ್ಪ ಸುಗಪ್ಪ (45) ಮೃತ ವ್ಯಕ್ತಿ. ಕಾರಿನಲ್ಲಿದ್ದ ಮೃತರ ಪತ್ನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 

‘ಗದಗಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿ‌ಸಿ ಬಸ್‌ ಹಾಗೂ ಗದಗದಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ ವ್ಯಾಗನಾರ್‌ ಕಾರು ನಾರಾಯಣಪುರ ಗ್ರಾಮಕ್ಕಿಂತ ಸ್ವಲ್ಪ ಹಿಂದೆ ಮುಖಾಮುಖಿ ಡಿಕ್ಕಿ ಹೊಡೆದಿವೆ. ಈ ಸಂದರ್ಭದಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ’ ಎಂದು ಗದಗ ಗ್ರಾಮಾಂತರ ಠಾಣೆ ಪಿಎಸ್‌ಐ ಅಜಿತ್‌ ಹೊಸಮನಿ ತಿಳಿಸಿದ್ದಾರೆ.

ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು