ಗುರುವಾರ , ಡಿಸೆಂಬರ್ 8, 2022
18 °C
ಅಪಘಾತದ ಬಳಿಕ ಸುಟ್ಟು ಕರಕಲಾದ ಕಾರು– ಬೈಕ್

ಬೈಕ್, ಕಾರು ಅಪಘಾತ: ದಂಪತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನರಗುಂದ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಭೈರನಹಟ್ಟಿ ಸಮೀಪದ ಕೊಣ್ಣೂರ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ಹುಬ್ಬಳ್ಳಿಯವರಾದ ಸಹದೇವ ದೇವರಮನಿ (42) ಸ್ಥಳದಲ್ಲಿಯೇ ಮೃತಪಟ್ಟಿದ್ದು ಅವರ ಪತ್ನಿ ದೀಪಾ ದೇವರಮನಿ (35) ಚಿಕಿತ್ಸೆಗೆ ಸ್ಪಂದಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಮಾವಾಸ್ಯೆ ಅಂಗವಾಗಿ ಹುಬ್ಬಳ್ಳಿಯ ದಂಪತಿ ಬಾಗಲಕೋಟೆ ಮಾರ್ಗವಾಗಿ ದೇವಸ್ಥಾನಕ್ಕೆ ಹೊರಟಿದ್ದರು. ಬಾಗಲಕೋಟೆ ಕಡೆಯಿಂದ ಅತಿವೇಗವಾಗಿ ಬಂದ ಕಾರು, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್‌ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಿಂಬದಿ ಕುಳಿತಿದ್ದ ದೀಪಾ ತೀವ್ರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಪ್ರಾಣ ಉಳಿಯಲಿಲ್ಲ. 

ನರಗುಂದ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದ ಬಳಿಕ ಕಾರು ಮತ್ತು ಬೈಕ್‌ಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೈಕ್‌ ಮತ್ತು ಕಾರಿಗೆ ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬ ಪ್ರಶ್ನೆಗೆ ಇನ್ನೂ ನಿಖರ ಕಾರಣ ತಿಳಿದು ಬಂದಿಲ್ಲ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರಾದರೂ, ಅವರು ಯಾರು? ಎಷ್ಟು ಮಂದಿ ಇದ್ದರು? ಎಲ್ಲಿಯವರು ಎಂಬ ಮಾಹಿತಿಯನ್ನು ಪೊಲೀಸರು ಬಿಟ್ಟುಕೊಟ್ಟಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು