ಗದಗ: ‘ಸಮೀಕ್ಷೆಯು ಜಾತಿಗಳಷ್ಟೇ ಸೀಮಿತವಾಗದೇ, ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಂಶಗಳನ್ನು ಒಳಗೊಂಡಿದೆ. ಜಾತಿ ಮಾಹಿತಿ ಜೊತೆಗೆ ಜನರ ಬದುಕಿನ ಸ್ಥಿತಿಗತಿ ವಿವರ ಪಡೆದು, ಅವಕಾಶ ವಂಚಿತರಿಗೆ ಸಮಾನ ಅವಕಾಶ ನೀಡುವುದು ಇದರ ಉದ್ದೇಶ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ತಿಳಿಸಿದರು.

‘ಜಾತಿ ಸಮೀಕ್ಷೆಯಲ್ಲಿ ಕ್ರಿಶ್ಚಿಯನ್ನಡಿ ವಿವಿಧ ಜಾತಿಗಳನ್ನು ಉಲ್ಲೇಖಿಸಲಾಗುವುದೇ ಅಥವಾ ಇಲ್ಲವೇ ಎಂಬುದು ಹಿಂದುಳಿದ ವರ್ಗಗಳ ಆಯೋಗವೇ ನಿರ್ಧರಿಸುತ್ತದೆ. ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನಷ್ಟೇ ಸರ್ಕಾರ ನೀಡಿದೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಜಾತಿ ಸಮೀಕ್ಷೆ ಹಿಂದೆ ಷಡ್ಯಂತ್ರವಿದೆ ಎಂದು ವಚನಾನಂದ ಸ್ವಾಮೀಜಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಕೇಂದ್ರ ಸರ್ಕಾರವೂ ಜಾತಿಸಮೀಕ್ಷೆ ನಡೆಸಲಿದ್ದು, ಅದರಲ್ಲಿಯೂ ಷಡ್ಯಂತ್ರ ಇರಲಿದೆಯೇ?’ ಎಂದು ಪ್ರಶ್ನಿಸಿದರು. ಸಮೀಕ್ಷೆ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಸಮೀಕ್ಷೆಯ ವಿಷಯದಲ್ಲಿ ಜಾತಿ ಒಡೆಯುವ ಪ್ರಶ್ನೆಯೇ ಇಲ್ಲ’ ಎಂದರು.

‘ರಾಜ್ಯದಲ್ಲಿ ಸಂಭವಿಸಿರುವ ಬೆಳೆಹಾನಿ ಬಗ್ಗೆ ಜಂಟಿ ಸಮೀಕ್ಷೆ ಪ್ರಗತಿಯಲ್ಲಿದೆ. ವರದಿ ಬಂದ ಬಳಿಕ ಬೆಳೆ ಪರಿಹಾರ ನೀಡಲಾಗುವುದು. ಗದಗ ಜಿಲ್ಲೆಯಲ್ಲಿ ಇನ್ನೆರೆಡು ದಿನಗಳಲ್ಲಿ ಜಂಟಿಸಮೀಕ್ಷೆಯ ಪೂರ್ಣಗೊಳ್ಳಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.