ಮುಂಡರಗಿ: ತಾಲ್ಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದ ಎಸ್.ಸಿ., ಎಸ್.ಟಿ ಸಮುದಾಯದ ಜನರಿಗೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮಂಗಳವಾರ ಆಹಾರದ ಕಿಟ್ ವಿತರಿಸಲಾಯಿತು.

ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಮಾತನಾಡಿ, ಕಾನೂನು ಎಲ್ಲರನ್ನು ಸಮನಾಗಿ ಕಾಣುತ್ತದೆ. ಸಣ್ಣ, ಪುಟ್ಟ ವಿಷಯಗಳಿಗೆ ಯಾರೂ ಮನಸ್ತಾಪ ಮಾಡಿಕೊಳ್ಳಬಾರದು. ಗ್ರಾಮಸ್ಥರು ಸಾಮರಸ್ಯದಿಂದ ಬದುಕಬೇಕು’ ಎಂದು ಮನವಿ ಮಾಡಿದರು.

ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ ಮಾತನಾಡಿ, ನಾವು ನಾಗರಿಕ ಸಮಾಜದಲ್ಲಿ ಬದುಕುತ್ತಿದ್ದು, ನಮ್ಮ ನಡುವೆ ಏನೇ ಸಮಸ್ಯೆಗಳು ಬಂದರೂ ಅವುಗಳನ್ನು ಎಲ್ಲರೂ ಸೌಹಾರ್ದದಿಂದ ಪರಿಹರಿಸಿಕೊಳ್ಳಬೇಕು. ಗ್ರಾಮಸ್ಥರೆಲ್ಲರೂ ಸಹೋದರತೆ, ಪ್ರೀತಿ, ವಿಶ್ವಾಸದಿಂದ ಬದುಕಬೇಕು. ಊರಿನಲ್ಲಿ ಶಾಂತಿ ಕದಡದಂತೆ ಎಲ್ಲರೂ ಒಗ್ಗಟ್ಟಾಗಿ ಮಾದರಿ ಜೀವನ ನಡೆಸಬೇಕು ಎಂದು ತಿಳಿಸಿದರು.

ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಟ್ಟು 174 ಕುಟುಂಬಗಳಿಗೆ ರೇಷನ್ ಕಿಟ್ ವಿತರಿಸಲಾಯಿತು.

ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಈಚೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ನಡುವೆ ಗಲಾಟೆ ನಡೆದಿತ್ತು. ಅದನ್ನು ನಿವಾರಿಸಿ ಎರಡೂ ಸಮಾಜಗಳಲ್ಲಿ ಸಾಮರಸ್ಯ ಮೂಡಿಸುವ ಉದ್ದೇಶದಿಂದ ಕಿಟ್ ವಿತರಿಸಲಾಯಿತು.

ಸಮಾಜ ಕಲ್ಯಾಣ ಇಲಾಖೆಯ ವಾರ್ಡನ್ ಶ್ರೀಕಾಂತ್ ಅರಹುಣಸಿ, ಎಲ್.ಎಂ.ಗಚ್ಚಿನಮನಿ, ಯಲ್ಲಪ್ಪ ನಾಗಮ್ಮನವರ, ಮಂಜುನಾಥ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಖೇಮ್ಯಾನಾಯ್ಕ್, ಬಿಲ್ ಕಲೆಕ್ಟರ್ ನದಾಫ್, ವಾಲಿಕಾರ ಚೆನ್ನಪ್ಪ, ನೀರಗಂಟಿಯ ದುರುಗಪ್ಪ, ಈರಣ್ಣ, ಗ್ರಾಮದ ಎರಡು ಸಮಾಜಗಳ ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-23-1510663196

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.