ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ನ.2ರಂದು ಸಬರಮತಿ ಆಶ್ರಮಕ್ಕೆ ಸಿಎಂ ಭೇಟಿ

ವಿವಿ ಆವರಣದಲ್ಲಿ ಅಧ್ಯಯನ ಶಾಲೆ-2 ಕಟ್ಟಡದ ಶಂಕುಸ್ಥಾಪನೆ
Published 1 ನವೆಂಬರ್ 2023, 16:10 IST
Last Updated 1 ನವೆಂಬರ್ 2023, 16:10 IST
ಅಕ್ಷರ ಗಾತ್ರ

ಗದಗ: ಇಲ್ಲಿನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದ ಆವರಣದಲ್ಲಿರುವ ಸಬರಮತಿ ಆಶ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ.3ರಂದು ಮಧ್ಯಾಹ್ನ 2ಕ್ಕೆ ಭೇಟಿ ನೀಡಲಿದ್ದಾರೆ. ಜತೆಗೆ ವಿಶ್ವವಿದ್ಯಾಲಯದ ಆವರಣದಲ್ಲಿ ನಿರ್ಮಾಣಗೊಳ್ಳಲಿರುವ ಅಧ್ಯಯನ ಶಾಲೆ-2 (ಹಂತ-1) ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಸಚಿವರಾದ ಎಚ್.ಕೆ.ಪಾಟೀಲ, ಪ್ರಿಯಾಂಕ್‌ ಖರ್ಗೆ ಉಪಸ್ಥಿತರಿರುತ್ತಾರೆ.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ವಿಶ್ವವಿದ್ಯಾಲಯದ ಸ್ಥಾಪನೆ ಅಂದಿನ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಮತ್ತು ಇಂದಿನ ಕಾನೂನು ಸಚಿವರಾದ ಎಚ್.ಕೆ.ಪಾಟೀಲ ಅವರ ಮಹತ್ವಾಕಾಂಕ್ಷಿ ಯೋಜನೆ ಆಗಿತ್ತು. 2017ರಲ್ಲಿ ಸ್ಥಾಪನೆಗೊಂಡ ಈ ವಿಶ್ವವಿದ್ಯಾಲಯದ ಭೂಮಿಪೂಜೆಯನ್ನು ಅಂದಿನ ಮತ್ತು ಇಂದಿನ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ 22.03.2018ರಂದು ನೆರವೇರಿಸಿದ್ದರು. ಈಗ ಅದೇ ಆವರಣದಲ್ಲಿ ಮತ್ತೊಂದು ಅಧ್ಯಯನ ಶಾಲೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

‘353 ಎಕರೆಯಷ್ಟು ರಮಣೀಯ ಪರಿಸರದಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಗೊಂಡ ಆರು ವರ್ಷಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಪಾಠ ಪ್ರವಚನಗಳಿಗೆ ಯೋಗ್ಯವಾದ ಅಧ್ಯಯನ ಶಾಲೆ, ವಿದ್ಯಾರ್ಥಿಗಳಿಗೆ ಸುಸಜ್ಜಿತವಾದ ವಿದ್ಯಾರ್ಥಿನಿಲಯ ಮತ್ತು ಭೋಜನಾ ಶಾಲೆ, ಸಿಬ್ಬಂದಿಗೆ ವಸತಿಗೃಹಗಳಲ್ಲದೇ, ವಿವಿಧ ಇಲಾಖೆಗಳ ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು, ನೌಕರರಿಗೆ ತರಬೇತಿ ನೀಡಲು ಅತ್ಯಾಧುನಿಕ ಸೌಕರ್ಯ ಹೊಂದಿರುವ ತರಬೇತಿ ಕೇಂದ್ರ ಹೊಂದಿದೆ’ ಎಂದು ಕುಲಪತಿ ಪ್ರೊ. ವಿಷ್ಣುಕಾಂತ ಎಸ್‌.ಚಟಪಲ್ಲಿ ತಿಳಿಸಿದ್ದಾರೆ.

‘ಆರು ವರ್ಷಗಳ ಅಲ್ಪಾವಧಿಯಲ್ಲಿ ವಿಶ್ವವಿದ್ಯಾಲಯವು ಗಮನಾರ್ಹ ಪ್ರಗತಿ ಸಾಧಿಸಿದ್ದು, ಶೈಕ್ಷಣಿಕ ಹಾಗೂ ಸಾಮಾಜಿಕ ವಲಯಗಳಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಇದುವರೆಗೆ ವಿಶ್ವವಿದ್ಯಾಲಯದಿಂದ 577 ವಿದ್ಯಾರ್ಥಿಗಳು ಉತ್ತೀರ್ಣಹೊಂದಿದ್ದು, ಪ್ರಸ್ತುತ 1,100 ವಿದ್ಯಾರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ವರ್ಗಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ’ ಕುಲಸಚಿವ ಪ್ರೊ. ಬಸವರಾಜ ಎಲ್‌. ಲಕ್ಕಣ್ಣವರ ತಿಳಿಸಿದ್ದಾರೆ.

ವಿಶ್ವವಿದ್ಯಾಲಯದ ಪ್ರಮುಖ ಆಕರ್ಷಣೆಗಳಲ್ಲಿ ಸಬರಮತಿ ಆಶ್ರಮ ಪ್ರಮುಖವಾಗಿದೆ. ಇದು ಸ್ಥಾಪನೆಗೊಂಡ ಮೂರು ವರ್ಷಗಳಲ್ಲಿ ಪ್ರೇರಣಾ, ಪ್ರೇಕ್ಷಣೀಯ ಕೇಂದ್ರವಾಗಿ ಪ್ರಸಿದ್ಧಿ ಪಡೆದಿದೆ. ಈವರೆಗೆ ಹತ್ತು ಸಾವಿರಕ್ಕಿಂತ ಹೆಚ್ಚು ಜನರು ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT