ಗದಗ: ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಪಿ.ಎಸ್.ಬೂಸರಡ್ಡಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಹಾಲಿ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
‘ಡಾ. ಪುಂಡಪ್ಪ ಶಂಕ್ರಪ್ಪ ಬೂಸರಡ್ಡಿ ಜಿಮ್ಸ್‌ನ ನಿರ್ದೇಶಕರಾಗಿದ್ದ ಅವಧಿಯಲ್ಲಿ (01.05.2016ರಿಂದ 10.08.2022) ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಸಂಬಂಧಪಟ್ಟ ಸರ್ಕಾರಿ ದಾಖಲೆಗಳನ್ನು ತಿದ್ದುಪಡಿ ಮಾಡಿದ್ದಾರೆ. ಕೆಲವು ದಾಖಲೆಗಳ ಮೂಲ ಒಳಪುಟಗಳನ್ನು ಕಳ್ಳತನ ಮಾಡಿ ಆ ಜಾಗದಲ್ಲಿ ನಕಲಿ ಪುಟಗಳನ್ನು ಸೇರಿ ಸರ್ಕಾರಿ ಹಣವನ್ನು ದುರುಪಯೋಗ ಪಡಿಸಿಕೊಂಡು ಮೋಸ ಮಾಡಿದ್ದಾರೆ’ ಎಂದು ಡಾ. ಬಸವರಾಜ ಬೊಮ್ಮನಹಳ್ಳಿ ಫೆ.20ರಂದು ದಾಖಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.