ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡೆಂಗಿ ಜ್ವರ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲ: ಬಸವರಾಜ ಬೊಮ್ಮಾಯಿ

Published 7 ಜುಲೈ 2024, 16:14 IST
Last Updated 7 ಜುಲೈ 2024, 16:14 IST
ಅಕ್ಷರ ಗಾತ್ರ

ಗದಗ: ‘ರಾಜ್ಯ ಸರ್ಕಾರ ಡೆಂಗಿ ಜ್ವರ ನಿಯಂತ್ರಣ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಡೆಂಗಿ ಜ್ವರ ಕಾಣಿಸಿಕೊಂಡು ಸುಮಾರು ಒಂದು ತಿಂಗಳು ಆಗಿದ್ದರೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದರೆ ನಿಯಂತ್ರಣ ಸಾಧ್ಯ ಎಂಬ ಭಾವನೆ ಬಿಡಬೇಕು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಭಾನುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದ ಅವರು, ‘ರಾಜ್ಯ ಸರ್ಕಾರ ಡೆಂಗಿ ಪ್ರಕರಣಗಳ ಸಂಖ್ಯೆಯನ್ನು ಮುಚ್ಚಿಡುವ ಪ್ರಯತ್ನ ಮಾಡುತ್ತಿದೆ. ಸರ್ಕಾರದ ಮಾಹಿತಿ ಪ್ರಕಾರ ರಾಜ್ಯದಲ್ಲಿ 7 ಸಾವಿರ ಪ್ರಕರಣಗಳು ಸಕ್ರಿಯವಾಗಿವೆ. ನಿಜ ಹೇಳಬೇಕೆಂದರೆ ಅದಕ್ಕಿಂತಲೂ ಎರಡುಪಟ್ಟು ಹೆಚ್ಚು ಪ್ರಕರಣಗಳು ಸಕ್ರಿಯವಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳು ಸೌಲಭ್ಯಗಳಿಲ್ಲದೇ ಸೋತಿವೆ’ ಎಂದು ಕಿಡಿಕಾರಿದರು.

‘ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಎಲ್ಲ ಜಿಲ್ಲೆಗಳಲ್ಲಿ ವಿಶೇಷ ತಂಡಗಳನ್ನು ರಚಿಸಿ, ಡೆಂಗಿ ನಿಯಂತ್ರಣಕ್ಕೆ ಕ್ರಮವಹಿಸಬೇಕು. ಡೆಂಗಿ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಬೇಕು. ಚುಚ್ಚುಮದ್ದು ಪೂರೈಕೆ ಮಾಡಬೇಕು. ಬಡವರಿಗೆ ಉಚಿತವಾಗಿ ರಕ್ತ ಪರೀಕ್ಷೆ ಮಾಡಿಸುವ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT