ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ ಗಡ್ಡದೇವರಮಠ ಗೆಲುವು ನಿಶ್ಚಿತ

ಸಚಿವ ಎಚ್.ಕೆ.ಪಾಟೀಲ ವಿಶ್ವಾಸ
Published 27 ಮಾರ್ಚ್ 2024, 14:13 IST
Last Updated 27 ಮಾರ್ಚ್ 2024, 14:13 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಮುಳಗುಂದ: ‘ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ 1.10 ಕೋಟಿ ಕುಟುಂಬಗಳನ್ನು ಬಡತನದಿಂದ ಮೇಲೆ ತರಲಾಗಿದೆ. ಸಿ.ಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೇಲೆ ಜನರು ವಿಶ್ವಾಸ ಇಟ್ಟಿದ್ದಾರೆ. ಈ ಬಾರಿ ಹಾವೇರಿ ಲೋಕಸಭಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಗೆಲುವು ನಿಶ್ಚಿತ’ ಎಂದು ಸಚಿವ ಎಚ್.ಕೆ.ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

ಹಾವೇರಿ–ಗದಗ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪರ ಗದಗ ತಾಲ್ಲೂಕಿನ ನಾಗಾವಿ ಗ್ರಾಮದಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯತರ್ಕರ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ರೈತರ ಆದಾಯ ದುಪ್ಪಟ್ಟು, ‘ಪ್ರತಿಯೊಬ್ಬರ ಖಾತೆಗೆ ಹದಿನೈದು ಲಕ್ಷ ರೂಪಾಯಿ, 2 ಕೋಟಿ ಯುವಕರಿಗೆ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದರು. ಆದರೆ ಅವರ ಯಾವುದೇ ಭರವಸೆ ಈಡೆರಿಸಿಲ್ಲ, ಯುವಕರನ್ನ ಕತ್ತಲೆಗೆ ನೋಕಿದೆ. ಬಿಜೆಪಿ ಸರ್ಕಾರದ ಬಗ್ಗೆ ಜನರು ತಾತ್ಸಾರ ಭಾವನೆ, ಅಗೌರ, ಹೊಂದಿದ್ದಾರೆ. ಈ ಬಾರಿ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ‘ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಕಾಂಗ್ರೆಸ್ ಬಡವರ ಪರ ಪಕ್ಷವಾಗಿದೆ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದ ಗೃಹಲಕ್ಷ್ಮಿ ಜೊತೆಗೆ ಮಹಾಲಕ್ಷ್ಮಿ ಯೋಜನೆಯು ಜಾರಿಗೆ ಬರಲಿದೆ. ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ’ ಎಂದು ಮನವಿ ಮಾಡಿದರು.

ಮಾಜಿ ಶಾಸಕ ಡಿ.ಆರ್.ಪಾಟೀಲ, ರಾಮಣ್ಣ ಲಮಾಣಿ, ಜಿ.ಎಸ್.ಗಡ್ಡದೇವರಮಠ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ಸುಂಕಾಪುರ, ಜಿಲ್ಲಾ ಯುತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ, ಕಾರ್ಯದರ್ಶಿ ಕೆ.ಎಚ್.ಪಾಟೀಲ, ಮುಖಂಡರಾದ ವಾಸಣ್ಣ ಕುರಡಗಿ, ಸುಜಾತ ದೊಡ್ಡಮನಿ, ನೀಲಮ್ಮ ಭೋಳನವರ, ಬಿ.ಆರ್.ದೇವರಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT