ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷ್ಮೇಶ್ವರ: ಕಾಂಗ್ರೆಸ್‍ನಿಂದ ಗೋಡೆ ಪ್ರಚಾರಕ್ಕೆ ಚಾಲನೆ

Published 2 ಮಾರ್ಚ್ 2024, 16:15 IST
Last Updated 2 ಮಾರ್ಚ್ 2024, 16:15 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ಮುಂಬರಲಿರುವ ಲೋಕಸಭೆ ಚುನಾವಣೆಯ ನಿಮಿತ್ತ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಪರ ಗೋಡೆ ಬರಹ ಆರಂಭಿಸಿದರು. ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಅವರು ಗೋಡೆ ಬರಹಕ್ಕೆ ಚಾಲನೆ ನೀಡಿದರು.

ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಜಿ.ಆರ್. ಕೊಪ್ಪದ ಮಾತನಾಡಿ, ‘ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಿದೆ. ಹೀಗಾಗಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‍ನ ಕೈ ಹಿಡಿಯಲಿದ್ದಾರೆ’ ಎಂದರು.

ರಾಜೀವ ಗಾಂಧಿ ಪಂಚಾಯತ್ ರಾಜ್ಯ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಫಕ್ಕೀರೇಶ ಮ್ಯಾಟಣ್ಣವರ ಮಾತನಾಡಿ ‘ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‍ನ ಜನಪ್ರಿಯತೆ ಹೆಚ್ಚಿದೆ. ಇದು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿದೆ. ಈ ಬಾರಿ ಪಕ್ಷದ ವರಿಷ್ಠರು ಯುವ ನಾಯಕ ಆನಂದಸ್ವಾಮಿ ಗಡ್ಡದೇವರಮಠರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಬೇಕು’ ಎಂದು ಮನವಿ ಮಾಡಿದರು.

ಎಸ್.ಪಿ. ಬಳಿಗಾರ, ಅಂಬರೀಷ ತೆಂಬದಮನಿ, ಸಾಯಿಬ್‍ಜಾನ್ ಹವಾಲ್ದಾರ, ರಾಜು ಕುಂಬಿ, ಫಕ್ಕೀರೇಶ ನಂದೆಣ್ಣವರ, ಮಹಾದೇವಪ್ಪ ಅಣ್ಣಿಗೇರಿ, ನೀಲಪ್ಪ ಪಡಿಗೇರಿ, ದಾದಾಪೀರ್ ಮುಚ್ಛಾಲೆ, ಎನ್.ಆರ್. ಪವಾರ, ಈರಣ್ಣ ಅಂಕಲಕೋಟಿ, ಎಂ.ಎಂ. ಗದಗ, ಹನಮಂತಪ್ಪ ಶೆರಸೂರಿ, ಯಲ್ಲಪ್ಪ ತಳವಾರ, ಬಾಬು ಅಳವಂಡಿ, ಕಿರಣ ನವಲೆ, ಶಿವಯೋಗೆಪ್ಪ ಚಂದರಗಿ, ಜಗದೀಶ ದೊಡ್ಡಮನಿ, ಸೂರಣಗಿ, ಪ್ರಕಾಶ ಕೊಂಚಿಗೇರಿಮಠ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT