ಗದಗ:‘ಜಿಲ್ಲೆಯಾದ್ಯಂತ ಕೊರೊನಾ ಸೋಂಕು ಹರಡದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಮನೆಯಲ್ಲಿ ಮತ್ತು ಆಸ್ಪತ್ರೆ ಸೇರಿ ಸದ್ಯ ಒಟ್ಟು 81 ಜನರು ತಾತ್ಕಾಲಿಕ ನಿಗಾ ವ್ಯವಸ್ಥೆಯಲ್ಲಿದ್ದಾರೆ’ ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ತಿಳಿಸಿದ್ದಾರೆ.

ಇವರಲ್ಲಿ ಈಗಾಗಲೇ 5 ಮಂದಿ 28 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. ಸದ್ಯ ಮನೆಯಲ್ಲಿ 74 ಮಂದಿ ಪ್ರತ್ಯೇಕ ನಿಗಾ ವ್ಯವಸ್ಥೆಯಲ್ಲಿದ್ದಾರೆ. ಆಸ್ಪತ್ರೆಗೆ ಇಬ್ಬರು ದಾಖಲಾಗಿದ್ದು, ಅವರ ಮೇಲೆ ನಿಗಾ ವಹಿಸಲಾಗುತ್ತಿದೆ.

ಒಟ್ಟು 12 ಮಂದಿಯ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇವರಲ್ಲಿ 9 ಮಂದಿಗೆ ಕೊರೊನಾ ಸೋಂಕು ಇಲ್ಲ ಎಂದು ವರದಿ ದೃಢಪಡಿಸಿದೆ. ಇನ್ನು ಮೂರು ವರದಿಗಳು ಬರಬೇಕಿವೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್-19 ವೈರಸ್ ಖಚಿತ ಪ್ರಕರಣಗಳು ಯಾವುದೂ ಕಂಡುಬಂದಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಜಿಮ್ಸ್) ದಾಖಲಾಗಿದ್ದ ಲಂಡನ್ ಪ್ರವಾಸದಿಂದ ಮರಳಿ ಬಂದ ಕುಟುಂಬದ ಮೂರು ವರ್ಷದ ಮಗುವಿಗೆ ಸೋಂಕು ತಗುಲಿಲ್ಲ ಎನ್ನುವುದು ಪರೀಕ್ಷೆಯಿಂದ ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.