ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಮೊಬೈಲ್‌ ಸ್ವಿಚ್‌ಆಫ್‌ ಮಾಡಿದರೆ ಎಫ್ಐಆರ್‌..!

ಕ್ವಾರಂಟೈನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ
Last Updated 23 ಜೂನ್ 2020, 12:56 IST
ಅಕ್ಷರ ಗಾತ್ರ

ಗದಗ: ಕೋವಿಡ್‌–19 ಸೋಂಕಿಗೆ ಸಂಬಂಧಿಸಿದಂತೆ ಸಾಂಸ್ಥಿಕ ಮತ್ತು ಹೋಂ ಕ್ವಾರೈಂಟೈನ್‌ನಲ್ಲಿರುವ ವ್ಯಕ್ತಿಗಳು, ಮೊಬೈಲ್‌ ಸ್ವಿಚ್ ಆಫ್‌ ಮಾಡಿದರೆ, ನಿರ್ಬಂಧಿತ ಪ್ರದೇಶದಿಂದ ಹೊರಗೆ ಓಡಾಡಿದರೆ, ಅಥವಾ ಕ್ವಾರಂಟೈನ್‌ಗೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿದರೆ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಜಿಲ್ಲಾಡಳಿತ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಹೆಚ್ಚುತ್ತಿರುವುದು ವಿಶೇಷವಾಗಿ ಸೋಂಕಿತರ ಸಂಪರ್ಕದಿಂದಲೇ ಹಲವರಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. ಇದುವರೆಗೆ ಜಿಲ್ಲೆಯಲ್ಲಿ 8 ಸಾವಿರಕ್ಕೂ ಹೆಚ್ಚು ಶಂಕಿತರು ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ.

‘ಕ್ವಾರಂಟೈನ್‍ನಲ್ಲಿರುವ ವ್ಯಕ್ತಿಗಳು ಯಾವುದೇ ಕಾರಣಕ್ಕೂ, ನಿರ್ಬಂಧಿತ ಪ್ರದೇಶ ಬಿಟ್ಟು ಹೊರಗೆ ಬರಬಾರದು. ಮೊಬೈಲ್‌ ನೆಟ್‌ವರ್ಕ್‌ ಆಧರಿಸಿ, ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ವಹಿಸಲಾಗುತ್ತದೆ. ಹೀಗಾಗಿ ಶಂಕಿತರು ಉದ್ದೇಶಪೂರ್ವಕವಾಗಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡರೆ 2005ರ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 188ರ ಅನ್ವಯ ಎಫ್ಐಆರ್ ದಾಖಲಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್-19 ಸೋಂಕು ಹರಡುವುದನ್ನು ತಡೆಯಲು ಸರ್ಕಾರ ‘ಕ್ವಾರಂಟೈನ್‌ ಅಲರ್ಟ ಸಿಸ್ಟಮ್’ ಪ್ರಾರಂಭಿಸಿದೆ. ಈ ವ್ಯವಸ್ಥೆಯಡಿ, ಸೋಂಕಿತರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಹೋಂ ಕ್ವಾರಂಟೈನ್‍ಗೆ ಒಳಪಡಿಸಲಾಗುತ್ತಿದೆ. ಈ ವ್ಯಕ್ತಿಗಳ ಮೊಬೈಲ್ ನೆಟ್‌ವರ್‌ಕ್‌ ಆಧಾರದ ಮೇಲೆ ನಿಗಾ ವಹಿಸಲಾಗುತ್ತಿದೆ. ಒಂದು ವೇಳೆ ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳು ನಿರ್ಬಂಧಿತ ಪ್ರದೇಶ ಬಿಟ್ಟು ಹೊರಗೆ ಓಡಾಡಿದರೆ, ಎಚ್ಚರಿಕೆ ಸಂದೇಶವು ರಾಜ್ಯ ಸಮೀಕ್ಷಾ ಘಟಕದ ಮೂಲಕ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ರವಾನೆಯಾಗುತ್ತದೆ.

ಜಿಲ್ಲೆಯ ಗ್ರಾಮಗಳಲ್ಲಿ ಕೊರೊನಾ ಪ್ರಕರಣ

ಗ್ರಾಮ; ಸಂಖ್ಯೆ; ಸಕ್ರಿಯ; ಗುಣಮುಖ;ಸಾವು

ಲಕ್ಕುಂಡಿ: 02; 0; 01; 01

ಕೋಟುಮಚಗಿ; 07; 07; 0; 0

ಹರ್ತಿ; 05; 05; 0; 0

ಕುರಡಗಿ; 01; 01; 0; 0

ಮಜ್ಜೂರ ತಾಂಡೆ 01; 01; 0; 0

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT