ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರ್ಗಸೂಚಿ ಪಾಲನೆ ಕಡ್ಡಾಯ: ಎಸ್‌ಪಿ ಯತೀಶ್

Last Updated 9 ಮೇ 2021, 4:26 IST
ಅಕ್ಷರ ಗಾತ್ರ

ಗದಗ: ಕೋವಿಡ್-19 ಎರಡನೇ ಅಲೆಯನ್ನು ನಿಯಂತ್ರಿಸಲು ಸಾರ್ವಜನಿಕರು ಸರ್ಕಾರದ ಮಾರ್ಗಸೂ ಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ಆದೇಶಿಸಿದ್ದಾರೆ.

ಮೇ 10ರ ಬೆಳಿಗ್ಗೆ 6ರಿಂದ 24ರ ಬೆಳಿಗ್ಗೆ 6ರವರೆಗೆ ಕಟ್ಟುನಿಟ್ಟಿನ ಲಾಕ್‌ಡೌನ್‌ ಘೋಷಿಸಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯ ಸರಪಳಿ ತುಂಡರಿಸಲು ಸರ್ಕಾರದಿಂದ ಜಾರಿಗೊಳಿಸಿರುವ ಪರಿಷ್ಕೃತ ಮಾರ್ಗಸೂಚಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯ ಎಲ್ಲ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಆಯಾ ವ್ಯಾಪ್ತಿಯಲ್ಲಿ ಪ್ಯಾಟ್ರೋಲಿಂಗ್‌, ಫಿಕ್ಸ್ ಪಾಯಿಂಟ್‌ಗಳಲ್ಲಿ ಸೂಕ್ತ ಬಂದೋಬಸ್ತ್ ನಿಯೋಜಿಸಿ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

14 ದಿನಗಳ ಲಾಕ್‌ಡೌನ್‌ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸಿ ಸೋಂಕು ಹರಡುವುದನ್ನು ತಡೆಗಟ್ಟಲು ಸಹಕರಿಸಬೇಕಿದೆ. ತುರ್ತು ಸಂದರ್ಭ ಹೊರತುಪಡಿಸಿ ಸಾರ್ವಜನಿಕರು ವಿನಾಕಾರಣ ವಾಹನ ತೆಗೆದುಕೊಂಡು ರಸ್ತೆಯಲ್ಲಿ ಸಂಚರಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಅನಗತ್ಯವಾಗಿ ರಸ್ತೆಯಲ್ಲಿ ಓಡಾಡದೇ ಸರ್ಕಾರ ನಿಗದಿಪಡಿಸಿದ ಅವಧಿಯಲ್ಲಿ ಮಾತ್ರ ಅಗತ್ಯ ವಸ್ತುಗಳನ್ನು ಖರೀದಿಸಬೇಕು. ಹೋಟೆಲ್ ಸಿಬ್ಬಂದಿಯವರೇ ಸಾರ್ವಜನಿಕ ಮನೆಗಳಿಗೆ ಉಪಹಾರ ತಲುಪಿಸಲು ಅವಕಾಶ ನೀಡಲಾಗಿದೆ. ಸರ್ಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆ ಹಾಗೂ ಅಂತರ ಜಿಲ್ಲೆ ವಾಹನ ಸಂಚಾರ ಸಂಪೂರ್ಣ ನಿಷೇಧಿಸಿದ್ದು, ಇಲಾಖೆ ವತಿಯಿಂದ ಯಾವುದೇ ಪಾಸ್‌ಗಳನ್ನು ವಿತರಿಸುತ್ತಿಲ್ಲ. ಸಾರ್ವಜನಿಕರು ಇಲಾಖೆ ಜತೆಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT