ಶುಕ್ರವಾರ, ಜೂನ್ 18, 2021
28 °C

ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್‌ಗೆ ಒಳಪಡುವ ಆತಂಕ; ತರಕಾರಿ ವ್ಯಾಪಾರ ಬಂದ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಕ್ಷ್ಮೇಶ್ವರ: ಪಟ್ಟಣದಲ್ಲಿ ತರಕಾರಿ ಮಾರಾಟ ಮಾಡುವವರೆಲ್ಲರೂ ಕಡ್ಡಾಯವಾಗಿ ರ‍್ಯಾಪಿಡ್ ಆ್ಯಂಟಿಜನ್ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂಬ ವದಂತಿ ಹಬ್ಬಿದ್ದರಿಂದ ಪರೀಕ್ಷೆ ಮಾಡಿಸಿಕೊಳ್ಳಲು ಬೆದರಿದ ಇಲ್ಲಿನ ಭಾನು ಮಾರ್ಕೆಟ್‍ನ ತರಕಾರಿ ವ್ಯಾಪಾರಸ್ಥರು ಗುರುವಾರ ಇಡೀ ದಿನ ತಮ್ಮ ಅಂಗಡಿಗಳನ್ನು ಬಂದ್ ಮಾಡಿದ್ದರು. ಇದರಿಂದಾಗಿ ತರಕಾರಿ ಖರೀದಿಗೆ ಬಂದಿದ್ದ ಸಾರ್ವಜನಿಕರು ತೊಂದರೆ ಅನುಭವಿಸಬೇಕಾಯಿತು.

ಈ ಕುರಿತು ತಹಶೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟರ ಅವರನ್ನು ಸಂಪರ್ಕಿಸಿದಾಗ ‘ಸಾರ್ವತ್ರಿಕವಾಗಿ ಟೆಸ್ಟ್ ಮಾಡಿಸಿಕೊಳ್ಳಲು ವ್ಯಾಪಾರಸ್ಥರಿಗೆ ಸೂಚನೆ ನೀಡಿಲ್ಲ. ವದಂತಿ ಹಬ್ಬಿದ್ದರಿಂದ ವ್ಯಾಪಾರಸ್ಥರು ತಮ್ಮಷ್ಟಕ್ಕೆ ತಾವೇ ವ್ಯಾಪಾರ ಬಂದ್ ಮಾಡಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು