ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊವಿಡ್ ನಿಯಂತ್ರಣದಲ್ಲಿ ಬೇಜವಾಬ್ದಾರಿ ಬೇಡ: ಸಚಿವ

Last Updated 22 ಜೂನ್ 2020, 14:34 IST
ಅಕ್ಷರ ಗಾತ್ರ

ಗದಗ: ‘ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ. ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಎಲ್ಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಬೇಜವಾಬ್ದಾರಿ ಬೇಡ’ ಎಂದು ಸಚಿವ ಸಿ.ಸಿ ಪಾಟೀಲ ಎಚ್ಚರಿಕೆ ನೀಡಿದರು.

ಸೋಮವಾರ ಇಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಇದುವರೆಗೆ ಮುಖ್ಯವಾಗಿ ಹೊರ ರಾಜ್ಯದಿಂದ ಬಂದವರ ಮೇಲೆ ನಿಗಾವಹಿಸಿ ಕ್ರಮ ವಹಿಸಲಾಗುತ್ತಿತ್ತು. ಆದರೆ, ಕೆಲವು ದಿನಗಳಿಂದ ಸೋಂಕು ಜಿಲ್ಲೆಯ ಗ್ರಾಮಗಳಿಗೂ ಕಾಲಿಟ್ಟಿದೆ. ಇದು ಆತಂಕಕಾರಿ ವಿಷಯ. ಅಧಿಕಾರಿಗಳು ಮುಂಜಾಗ್ರತೆ ವಹಿಸಿ, ಸಮುದಾಯಕ್ಕೆ ಸೋಂಕು ಹರಡುವುದನ್ನು ತಡೆಯಬೇಕು’ ಎಂದರು.

‘ಪ್ರತಿ ತಾಲ್ಲೂಕಿನಲ್ಲೂ ಗಂಟು ದ್ರವದ ಪರೀಕ್ಷೆಗಳು ನಡೆಯುವಂತೆ ನೋಡಿಕೊಳ್ಳಬೇಕು. ಇದಕ್ಕೆ ಬೇಕಿರುವ ವಿಟಿಎಂ ಕಿಟ್‌ಗಳನ್ನು ಮೊದಲೇ ದಾಸ್ತಾನು ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಸಮುದಾಯ ಭವನ, ಕಲ್ಯಾಣ ಮಂಟಪ, ವಸತಿ ಶಾಲೆ, ಹೋಟೆಲ್, ಒಳಾಂಗಣ ಕ್ರೀಡಾಂಗಣ ಸೇರಿ ಒಟ್ಟು 278 ಕೇಂದ್ರಗಳನ್ನು ಕೋವಿಡ್‌ ಆರೈಕೆ ಕೇಂದ್ರಗಳನ್ನಾಗಿ ಗುರುತಿಸಲಾಗಿದೆ’ ಎಂದರು.

‘ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಜಿಮ್ಸ್‌) ಪ್ರತಿದಿನ ಮರು ಪರೀಕ್ಷೆ ಸೇರಿ ಒಟ್ಟು 215 ಗಂಟಲು ದ್ರವದ ಪರೀಕ್ಷೆಗಳನ್ನು ಮಾಡಬಹುದು’ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ,ಸಿಇಒ ಡಾ.ಆನಂದ್ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ ಎನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT