ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ ಜಿಲ್ಲೆಯಲ್ಲಿ ಮತ್ತೆ 88 ಮಂದಿಗೆ ಸೋಂಕು

Last Updated 8 ಸೆಪ್ಟೆಂಬರ್ 2020, 1:40 IST
ಅಕ್ಷರ ಗಾತ್ರ

ಗದಗ: ‘ಜಿಲ್ಲೆಯಲ್ಲಿ ಮತ್ತೆ 88 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಗದಗ ತಾಲ್ಲೂಕಿನಲ್ಲಿ 50, ಮುಂಡರಗಿ 13, ನರಗುಂದ 9, ರೋಣ 5, ಶಿರಹಟ್ಟಿ 10 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ ಎಂದು ಅವರು ಹೇಳಿದ್ದಾರೆ.

ಮಾಸ್ಕ್‌ ವಿತರಣೆ

ಮುಳಗುಂದ : ಕೋವಿಡ್-19 ಸೋಂಕು ತಡೆಗಟ್ಟಲು ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ. ಬೀದಿ ಬದಿ ವ್ಯಾಪಾರಿಗಳು ಮಾಸ್ಕ್ ಧರಿಸಬೇಕು ಎಂದು ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಎಂ.ಎಸ್.ಬೆಂತೂರ ಹೇಳಿದರು.

ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಸ್ಥಳೀಯ ಘಟಕದ ಸದಸ್ಯರಿಗೆ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ಸಂಘದಿಂದ ಉಚಿತವಾಗಿ ಮಾಸ್ಕ್ ಮತ್ತು ಡೆಟಾಲ್ ಸೋಪ್‌ ವಿತರಿಸಿ ಮಾತನಾಡಿದರು.

ಬೀದಿ ವ್ಯಾಪಾರಿಗಳಿಗೆ ಪ್ರಧಾನ ಮಂತ್ರಿ ಆತ್ಮನಿರ್ಭರ ಯೋಜನೆ ಅಡಿ ಯಾವುದೇ ಭದ್ರತೆ ಇಲ್ಲದೇ ರಾಷ್ಟ್ರೀಕೃತ ಬ್ಯಾಂಕ್ ಮೂಲಕ 10 ಸಾವಿರ ಸಾಲ ನೀಡಲಾಗುತ್ತಿದೆ. ಈ ಯೋಜನೆಯಡಿ ಸ್ಥಳಿಯವಾಗಿ 137 ಜನ ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದು ಮೊದಲ ಹಂತದಲ್ಲಿ 18 ಫಲಾನುಭವಿಗಳಿಗೆ ಸಾಲ ಸೌಲಭ್ಯ ದೊರೆತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT