ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷ್ಕೃತ ಮಾರ್ಗಸೂಚಿ ಎಲ್ಲರೂ ಪಾಲಿಸಿ: ಎಂ.ಸುಂದರೇಶ್‌ ಬಾಬು

ಕೊರೊನಾ ಸೋಂಕು ನಿಯಂತ್ರಣವಾಗಿದೆ ನಿರ್ನಾಮವಾಗಿಲ್ಲ ಮರೆಯದಿರಿ– ಜಿಲ್ಲಾಧಿಕಾರಿ
Last Updated 13 ಜೂನ್ 2021, 15:57 IST
ಅಕ್ಷರ ಗಾತ್ರ

ಗದಗ: ‘ರಾಜ್ಯ ಸರ್ಕಾರ ಕೊರೊನಾ ಸೋಂಕಿನ 2ನೇ ಅಲೆ ನಿಯಂತ್ರಣವಾದ ಜಿಲ್ಲೆಗಳಲ್ಲಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ. ಈ ಸಂದರ್ಭದಲ್ಲಿ ಸಾರ್ವಜನಿಕರು ಕೊರೊನಾ ಸೋಂಕು ನಿಯಂತ್ರಣವಾಗಿದೆ; ನಿರ್ನಾಮವಾಗಿಲ್ಲ ಎಂಬುದನ್ನು ಮರೆಯಬಾರದು’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

‘ಪರಿಷ್ಕೃತ ಮಾರ್ಗಸೂಚಿಗಳು ಜೂನ್ 14ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 21ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿವೆ. ಸಾರ್ವಜನಿಕರು ಅಗತ್ಯ ಸಂದರ್ಭದಲ್ಲಿ ಮಾತ್ರವೇ ಮನೆಯಿಂದ ಹೊರಗೆ ಬರಬೇಕು. ಅನಗತ್ಯ ತಿರುಗಾಟ ಬೇಡ. ತರಕಾರಿಗಳನ್ನು ಮನೆ ಮುಂದೆ ಬರುವ ತಳ್ಳುಗಾಡಿ ವ್ಯಾಪಾರಿಗಳಲ್ಲಿ ಖರೀದಿಸಬೇಕು’ ಎಂದು ತಿಳಿಸಿದ್ದಾರೆ.

‘ಕೊರೊನಾ ಸೋಂಕು ನಿಯಂತ್ರಣ ಸಾರ್ವಜನಿಕರ ಸಹಕಾರದಿಂದ ಮಾತ್ರವೇ ಸಾಧ್ಯ. ಆದ್ದರಿಂದ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲನೆ ಮಾಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕಾರ ನೀಡಬೇಕು‌’ ಎಂದು ಮನವಿ ಮಾಡಿದ್ದಾರೆ.

‘ಗದಗ ಜಿಲ್ಲೆಯಲ್ಲಿ ಶೇ 50ರಷ್ಟು ಸಿಬ್ಬಂದಿಯೊಂದಿಗೆ ಕೈಗಾರಿಕೆಗಳು ಕಾರ್ಯನಿರ್ವಹಿಸಬಹುದಾಗಿದೆ. ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಿದ್ದು, ಬೆಳಿಗ್ಗೆ 5ರಿಂದ 10ವರಗೆ ಉದ್ಯಾನಗಳನ್ನು ತೆರೆಯಬಹುದು. ಪ್ರತಿದಿನ ರತ್ರಿ 7ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದೆ. ವಾರಾಂತ್ಯ ಕರ್ಫ್ಯೂ ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಸಾರ್ವಜನಿಕರು ಮನೆಯಲ್ಲೇ ಇರಬೇಕು’ ಎಂದು ತಿಳಿಸಿದ್ದಾರೆ.

ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಆರ್ಥಿಕ ಚಟುವಟಿಕೆ ನಡೆಸಲು ಹಾಗೂ ಅಗತ್ಯ ವಸ್ತು, ಮದ್ಯ ಖರೀದಿಗೆ ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಜನರು ಸುರಕ್ಷಿತ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಒಂದು ವಾರಕ್ಕಾಗುವಷ್ಟು ದಿನಸಿ, ತರಕಾರಿಗಳನ್ನು ಒಮ್ಮೆಲೇ ಖರೀದಿಸಬೇಕು. ಪ್ರತಿದಿನ ಮಾರುಕಟ್ಟೆಗೆ ಬರುವುದನ್ನು ಸ್ವಯಂ ನಿಯಂತ್ರಿಸಿಕೊಳ್ಳಬೇಕು. ವ್ಯಾಪಾರಸ್ಥರು ಅಂಗಡಿಗಳಲ್ಲಿ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT