‘ಅವರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹೀಗಾಗಿ ಗುರುವಾರ ಕೋವಿಡ್–19 ಪರೀಕ್ಷೆ ಮಾಡಿಸಿದ್ದರು. ವರದಿ ಬರುವ ಮುನ್ನವೇ ತೀವ್ರ ಉದ್ವೇಗಕ್ಕೆ ಒಳಗಾಗಿ ಆತ್ಮಹತ್ಯೆಗೆ ಶರಣಾದರು. ಪರೀಕ್ಷೆಯ ವರದಿ ಬಂದಿದ್ದು, ಅವರಿಗೆ ಕೋವಿಡ್ ತಗುಲಿರುವುದು ಖಚಿತವಾಗಿದೆ’ ಎಂದು ಜಿಮ್ಸ್ ನಿರ್ದೇಶಕ ಡಾ. ಬೂಸರೆಡ್ಡಿ ತಿಳಿಸಿದರು. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.