ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ಶಾಲೆ ಉಳಿವಿಗೆ ಸರ್ಕಾರ ಬದ್ಧ

ಶಾಸಕ ಜಿ.ಎಸ್.ಪಾಟೀಲ ಹೇಳಿಕೆ
Published : 28 ಸೆಪ್ಟೆಂಬರ್ 2024, 16:26 IST
Last Updated : 28 ಸೆಪ್ಟೆಂಬರ್ 2024, 16:26 IST
ಫಾಲೋ ಮಾಡಿ
Comments

ಡಂಬಳ: ‘ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪಾಲಕರು ಈ ಬಗ್ಗೆ ಜಾಗೃತರಾಗಿ, ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸಬೇಕು’ ಎಂದು ರೋಣ ಶಾಸಕ ಜಿ.ಎಸ್.ಪಾಟೀಲ ಹೇಳಿದರು.

ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ ಶನಿವಾರ ನಡೆದ ಪೂರಕ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಶಿಕ್ಷಣ ಕ್ಷೇತ್ರಕ್ಕೆ ಸಾವಿರಾರು ಕೋಟಿ ಅನುದಾನ ಮೀಸಲಿಡಲಾಗಿದ್ದು, ಸರ್ಕಾರಿ ಶಾಲೆಗಳ ಉಳಿವಿಗೆ ನಮ್ಮ ಸರ್ಕಾರ ಬದ್ಧವಾಗಿದೆ’ ಎಂದರು.

‘ವಾರದಲ್ಲಿ ಆರು ದಿನ ಬೇಯಿಸಿದ ಮೊಟ್ಟೆ ವಿತರಿಸಲಾಗುತ್ತಿದ್ದು, ಮೊಟ್ಟೆ ತಿನ್ನದ ಮಕ್ಕಳಿಗೆ ಬಾಳೆ ಹಣ್ಣು, ಚಿಕ್ಕಿ ವಿತರಿಸಲಾಗುತ್ತದೆ. ಅಜೀಂ ಪ್ರೇಮ್‌ಜಿ ಅವರ ಸಾಮಾಜಿಕ ಕಾರ್ಯ ಶ್ಲಾಘನೀಯ’ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಪಡ್ನೆಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ತಹಶೀಲ್ದಾರ್‌ ಎರಿಸ್ವಾಮಿ, ಅಕ್ಷರದಾಸೋಹ ಅಧಿಕಾರಿ ಎಸ್.ವೈ. ವಿಭೂತಿ, ಸಿಆರ್‌ಪಿ ಮೃತುಂಜಯ್ಯ ಪೂಜಾರ, ಎಸ್‍ಡಿಎಂಸಿ ಅಧ್ಯಕ್ಷ ಕರಿಯಪ್ಪ ಕರಿಗಾರ, ಮುಖ್ಯಶಿಕ್ಷಕ ಬಾಪುಗೌಡ ಪಾಟೀಲ, ಕಸ್ತೂರಿಬಾಗಾಂಧಿ ಶಾಲೆಯ ಮುಖ್ಯಶಿಕ್ಷಕ ಎಸ್.ಬಿ. ಅಬ್ಬಿಗೇರಿ, ಗಂಗಾಧರ ಅಣ್ಣಿಗೇರಿ, ಶ್ರೀದೇವಿ ಹಿರೇಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT