ಗದಗ: ‘ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ಅಧಿಕಾರಿಗಳು ಯುದ್ಧ ಪರಿಸ್ಥಿತಿ ಸಮರ್ಪಕ ನಿರ್ವಹಣೆಗೆ ಸನ್ನದ್ಧರಾಗಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚಿಸಿದರು.

ದೇಶದಲ್ಲಿ ಯುದ್ದ ಸನ್ನಿವೇಶದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ತುರ್ತು ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಅಧಿಕಾರಿಗಳು ಹಾಗೂ ಸಿಬ್ಬಂದಿ ಕೇಂದ್ರ ಸ್ಥಾನದಲ್ಲಿದ್ದು ಪರಿಸ್ಥಿತಿಗೆ ಅನುಗುಣವಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಿಲ್ಲೆಯಲ್ಲಿನ ಪ್ರಮುಖ ಸ್ಥಳಗಳು, ದೇವಾಲಯ, ಮಸೀದಿ, ಚರ್ಚ್, ಜನಸಂದಣಿ ಇರುವ ಪ್ರದೇಶಗಳಲ್ಲಿ ಸಾರ್ವಜನಿಕರ ರಕ್ಷಣಾ ಕಾರ್ಯದ ಕಡೆಗೆ ನಿಗಾ ವಹಿಸಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್ಗಳು, ಇಒಗಳು ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಬೇಕು’ ಎಂದು ಸೂಚಿಸಿದರು.

ಜಿಲ್ಲಾಡಳಿತದೊಂದಿಗೆ ತುರ್ತು ಪರಿಸ್ಥಿತಿಯಲ್ಲಿ ವಿವಿಧ ಇಲಾಖೆಗಳಿಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಹಂಚಿಕೆಯನ್ನು ಮಾಡಲಾಗಿದೆ. ಮಾಜಿ ಸೈನಿಕರು ಎನ್ಸಿಸಿ, ಎನ್ಎಸ್ಎಸ್, ಪೊಲೀಸ್ ಇಲಾಖೆಯವರು ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಬೇಕು. ಅಧಿಕಾರಿಗಳು ಯಾವುದೇ ಕಾರಣಕ್ಕೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಬಾರದು ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಮಾತನಾಡಿ, ‘ಯುದ್ದ ಸನ್ನಿವೇಶದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಮಾರ್ಗಸೂಚಿಗಳ ಪಾಲನೆ ಅವಶ್ಯವಾಗಿದೆ. ಆರೋಗ್ಯ ಇಲಾಖೆಯವರು ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಲ್ಲಿ ಔಷಧ ಸರಬರಾಜು, ವೈದ್ಯಕೀಯ ಸೇವೆ, ಆಕ್ಸಿಜನ್, ಅಂಬುಲನ್ಸ್ಗಳ ಸಿದ್ಧತೆ ಮಾಡಿಟ್ಟುಕೊಳ್ಳಬೇಕು. ಅಗತ್ಯಕ್ಕೆ ಅನುಗುಣವಾಗಿ ಸಾರ್ವಜನಿಕರ ರಕ್ಷಣೆಗಾಗಿ ಅಗ್ನಿಶಾಮಕದಳ, ಕಂದಾಯ, ಯುವಜನ ಸೇವೆ, ಲೋಕೋಪಯೋಗಿ, ಆಹಾರ, ಶಿಕ್ಷಣ, ಸಾರಿಗೆ, ಹೆಸ್ಕಾಂ ಹಾಗೂ ಪೊಲೀಸ್ ಇಲಾಖೆಯವರು ಕಾರ್ಯನಿರ್ವಹಣೆಗೆ ಪೂರ್ವ ತಯಾರಿ ಮಾಡಿಟ್ಟುಕೊಳ್ಳಬೇಕು’ ಎಂದರು.

ನಿವೃತ್ತ ಸೈನಿಕರಿಗೆ ಪ್ರತ್ಯೇಕ ಜವಾಬ್ದಾರಿ ಕೊಡಲಾಗುತ್ತದೆ. ಜಿಲ್ಲೆಯಲ್ಲಿನ ಹಾಸ್ಟೆಲ್ಗಳ ರಕ್ಷಣೆ ಕಡೆ ನಿಗಾ ವಹಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕೂಡ ಸಭೆ ನಡೆಸಿ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು. ಮಾಕ್ ಡ್ರಿಲ್ ಕಾರ್ಯಕ್ರಮ ನಡೆಸಬೇಕು. ಎನ್ಸಿಸಿ, ಎನ್ಎಸ್ಎಸ್ ವಿದ್ಯಾರ್ಥಿಗಳ ಸಂಘಟನೆಯೊಂದಿಗೆ ನಾಗರಿಕರಲ್ಲಿ ಆತ್ಮವಿಶ್ವಾಸ ತುಂಬುವ ಕಾರ್ಯವಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್. ಮಾತನಾಡಿ, ‘ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಬೇಕು’ ಎಂದು ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಎಂ.ಬಿ.ಸಂಕದ ಅವರು ವಿವಿಧ ಇಲಾಖೆಗಳು ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿವರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಡಿಡಿಪಿಐ ಆರ್.ಎಸ್.ಬುರುಡಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಪಡೆಗಳು, ಎನ್ಸಿಸಿ, ಎನ್ಎಸ್ಎಸ್, ಗೃಹರಕ್ಷಕದಳ, ನಾಗರಿಕ ಸೇವಾ ಇಲಾಖೆ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.