ಶನಿವಾರ, ನವೆಂಬರ್ 28, 2020
18 °C
ತಾಲ್ಲೂಕು ಮಟ್ಟದ ಅಧಿಕಾರಿಗಳ ಜತೆಗೆ ಜಿಲ್ಲಾಧಿಕಾರಿ ವಿಡಿಯೊ ಕಾನ್ಫರೆನ್ಸ್‌

ಆದ್ಯತೆ ಮೇರೆಗೆ ಕೋವಿಡ್‌ ಪರೀಕ್ಷೆ: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ‘ಪದವಿ ಕಾಲೇಜು ವಿದ್ಯಾರ್ಥಿಗಳ ಕೋವಿಡ್‌–19 ಪರೀಕ್ಷೆಯನ್ನು ಆದ್ಯತೆ ಮೇರೆಗೆ ನಡೆಸಬೇಕು’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಗದಗ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಟಿಎಚ್‌ಒಗಳು ತಾಲ್ಲೂಕಿನಲ್ಲಿರುವ ಪದವಿ ಕಾಲೇಜುಗಳ ಪ್ರಾಂಶುಪಾಲರ ಜತೆಗೆ ಸಮನ್ವಯ ಸಾಧಿಸಿ, ಸಮಯ ನಿಗದಿಪಡಿಸಿಕೊಂಡು ವಿದ್ಯಾರ್ಥಿಗಳ ಸೋಂಕು ಪರೀಕ್ಷೆ ಮಾಡಿ, ವರದಿ ನೀಡ ಬೇಕು. ತಪಾಸಣೆ ವೇಳೆ ಸೋಂಕು ದೃಢ ಪಟ್ಟಲ್ಲಿ, ನಿಯಮಾನುಸಾರ ಸೂಕ್ತ ಚಿಕಿತ್ಸೆ ಒದಗಿಸಬೇಕು. ಕೋವಿಡ್‌–19 ತಪಾಸಣೆ, ಚಿಕಿತ್ಸೆಯನ್ನು ಸರ್ಕಾರವು ಸಂಪೂರ್ಣ ಉಚಿತವಾಗಿ ನೀಡಲಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ಕೊಡಬೇಕು’ ಎಂದು ತಿಳಿಸಿದರು.

‘ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚಿಸಿದಂತೆ ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ ಕಾರ್ಡ್‌ಗಳ ವಿತರ ಣೆಯ ಕಾರ್ಯ ಚುರುಕುಗೊಳಿಸಬೇಕು. ಅರ್ಹರೆಲ್ಲರಿಗೂ ಆರೋಗ್ಯ ಕರ್ನಾಟಕ ಕಾರ್ಡ್‌ ತಲುಪುವಂತೆ ಕ್ರಮ ವಹಿಸಬೇಕು. ಈ ಮೂಲಕ ಜಿಲ್ಲೆಯ ಬಡವರಿಗೆ ಉಚಿತ ಆರೋಗ್ಯ ಸೇವೆ ದೊರೆಯುವಂತೆ ಕ್ರಮ ವಹಿಸಬೇಕು’ ಎಂದು ಹೇಳಿದರು.

‘ಕಳೆದ ಸಾಲಿನಲ್ಲಿ ಮಳೆ, ಪ್ರವಾಹ ದಿಂದಾದ ಹಾನಿಗೆ ಪರಿಹಾರ ನೀಡಿ, ಪರಿ ಹಾರ ಕಾರ್ಯ ಮುಕ್ತಾಯಗೊಳಿಸಬೇಕು. ಮನೆ ಹಾನಿಯಾದವರು ಈವರೆಗೆ ಮನೆ ನಿರ್ಮಾಣ ಕಾಮಗಾರಿ ಕೈಗೊಳ್ಳ ದಿದ್ದಲ್ಲಿ, ಅವರಿಗೆ ಮನೆ ನಿರ್ಮಾಣ ಮಾಡಿ ಕೊಳ್ಳುವಂತೆ ಸೂಚಿಸಬೇಕು’ ಎಂದರು.

‘ಕೃಷಿ, ತೋಟಗಾರಿಕೆ ಇಲಾಖೆ ಅಧಿ ಕಾರಿಗಳು ರೈತರಿಗೆ ಹವಾಮಾನ ಆಧಾರಿತ ಬೆಳೆಗಳನ್ನು ಬೆಳೆಯುವ ಹಾಗೂ ಸೂಕ್ತ ರೀತಿಯ ಮುಂಜಾಗ್ರತಾ ಕ್ರಮ ವಹಿಸುವ ಬಗ್ಗೆ ಆಗಾಗ್ಗೆ ಮಾಹಿತಿ ನೀಡಬೇಕು. ಪುರಸಭೆ, ಪಟ್ಟಣ ಪಂಚಾಯ್ತಿ, ನಗರಸಭೆಯಿಂದ ಈಗಾಗಲೇ ವಿವಿಧ ಯೋಜನೆಗಳ ಅಡಿಯಲ್ಲಿ ಜಮೀನು ಖರೀದಿಸಿ ಅರ್ಹ ಫಲಾನುಭವಿಗಳ ಆಯ್ಕೆ, ಸೂಕ್ತ ನಿವೇಶನ ಹಂಚಿಕೆ, ನಿವೇಶನ ಪಟ್ಟಾ ವಿತರಣೆ ಕಾರ್ಯವನ್ನು ಶೀಘ್ರವೇ ಮಾಡುವ ಮೂಲಕ ಬಡವರಿಗೆ ಸರ್ಕಾರದ ಸವಲತ್ತುಗಳು ದೊರಕಿಸಿ ಕೊಡಬೇಕು’ ಎಂದು ಸೂಚಿಸಿದರು.

ಡಿಎಚ್‍ಒ ಡಾ.ಸತೀಶ್ ಬಸರೀಗಿಡದ, ನಗರಸಭೆ ಪೌರಾಯುಕ್ತ ರಮೇಶ್ ಜಾಧವ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು