ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌: ಇಂದಿನಿಂದ ಮತ್ತಷ್ಟು ಸಡಿಲ

ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ
Last Updated 5 ಜುಲೈ 2021, 4:21 IST
ಅಕ್ಷರ ಗಾತ್ರ

ಗದಗ: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಧಿಸಿದ್ದ ಕಠಿಣ ನಿಯಮಗಳನ್ನು ಸಡಿಲಗೊಳಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಪರಿಷ್ಕೃತ ಮಾರ್ಗಸೂಚಿಗಳು ಜುಲೈ 5ರಿಂದ 19ರವರೆಗೆ ಜಾರಿಯಲ್ಲಿ ಇರಲಿವೆ.

‘ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯಲ್ಲಿ ಯಾವುದಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ಯಾವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂಬ ನಿಯಮಗಳನ್ನು ಜಿಲ್ಲೆಯಲ್ಲಿ ಯಥಾವತ್ತಾಗಿ ಜಾರಿಗೊಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ತಿಳಿಸಿದ್ದಾರೆ.

ಜುಲೈ 5ರಿಂದ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಇನ್ನು ಮುಂದೆ ವಾರಾಂತ್ಯ ಕರ್ಫ್ಯೂ ಇರುವುದಿಲ್ಲ. ಆದರೆ, ರಾತ್ರಿ 9ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರಲಿದೆ.

ಸೋಮವಾರದಿಂದ ಸರ್ಕಾರಿ ನೌಕರರು, ಕೈಗಾರಿಕೆಗಳು, ಖಾಸಗಿ ಸಂಸ್ಥೆಗಳು ಶೇ 100 ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಮಾಲ್‌ಗಳನ್ನು ತೆರೆಯ
ಬಹುದು. ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಭಕ್ತಿ ಸೇವೆಗೆ ಅವಕಾಶ ಇರುವುದಿಲ್ಲ. ಮದುವೆ ಹಾಗೂ ಇನ್ನಿತರ ಶುಭ ಸಮಾರಂಭಗಳಿಗೆ 100 ಮಂದಿ ಭಾಗವಹಿಸಲು ಅವಕಾಶ ಇರಲಿದೆ.ಬಾರ್‌ ಅಂಡ್‌ ರೆಸ್ಟೊರೆಂಟ್‌ಗಳು ತೆರೆದಿರಲಿವೆ.

ಈಜುಕೊಳ ಮತ್ತು ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ನಡೆಸಲು ಅವಕಾಶ ನೀಡಲಾಗಿದೆ. ಆದರೆ, ಜನರು ಕುಳಿತು ವೀಕ್ಷಿಸಲು ಅವಕಾಶ ಇರುವುದಿಲ್ಲ. ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳಿಗೆ ಅವಕಾಶವಿಲ್ಲ. ಚಿತ್ರಮಂದಿರಗಳನ್ನು ತೆರೆಯುವಂತಿಲ್ಲ. ಸರ್ಕಾರ ಪ್ರತ್ಯೇಕ ಆದೇಶ ಹೊರಡಿಸುವವರೆಗೆ ಶಾಲಾ, ಕಾಲೇಜುಗಳನ್ನು ತೆರೆಯಲು ಅವಕಾಶ ಇರುವುದಿಲ್ಲ.

ರಾತ್ರಿ ಕಾರ್ಯಾಚರಿಸುವ ಕೈಗಾರಿಕೆಗಳ ನೌಕರರು ಐಡಿ ಕಾರ್ಡ್ ತೋರಿಸಿ ಪ್ರಯಾಣಿಸಬಹುದು. ರಾತ್ರಿ ಕರ್ಪ್ಯೂ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳನ್ನು ಹೊರತುಪಡಿಸಿ ವಾಹನಗಳ ಅನಗತ್ಯ ಸಂಚಾರವನ್ನು ನಿರ್ಬಂಧಿಸಲಾಗಿದೆ.

‘ಟೆಲಿಕಾಂ, ಇಂಟರ್ನೆಟ್ ಸಂಸ್ಥೆಗಳ ನೌಕರರು ಮತ್ತು ವಾಹನಗಳ ಸಂಚಾರಕ್ಕೆ ನಿರ್ಬಂಧವಿಲ್ಲ. ಆದರೆ ಗುರುತಿನಚೀಟಿಯೊಂದಿಗೆ ಪ್ರಯಾಣಿಸಬೇಕು. ವೈದ್ಯಕೀಯ ತುರ್ತು ಸೇವೆಗಳು, ಫಾರ್ಮಸಿಗಳ ಕಾರ್ಯಾಚರಣೆ ಹಾಗೂ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ. ಸರಕುಗಳ ಹೋಂ ಡೆಲಿವರಿ, ಇ-ಕಾಮರ್ಸ್ ಚಟುವಟಿಕೆಗಳಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ಅವಕಾಶ ಇರುತ್ತದೆ. ರೈಲು, ವಿಮಾನ ಸೇವೆಗೆ ಎಂದಿನಂತೆ ಅವಕಾಶವಿದ್ದು ಟಿಕೆಟ್ ಅನ್ನು ಪಾಸ್ ರೀತಿಯಲ್ಲಿ ಬಳಸಬಹುದು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರು ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು. ಅಗತ್ಯ ಸಂದರ್ಭದಲ್ಲಿ ಮನೆಯಿಂದ ಹೊರಬಂದರೆ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಬೇಕು

ಎಂ.ಸುಂದರೇಶ್‌ ಬಾಬು, ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT