ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಆರೈಕೆ ಕೇಂದ್ರ ಸ್ಥಾಪನೆಗೆ ಆಗ್ರಹ

Last Updated 9 ಮೇ 2021, 4:27 IST
ಅಕ್ಷರ ಗಾತ್ರ

ನರೇಗಲ್:‌ ಕೋವಿಡ್ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನರೇಗಲ್‌ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಬೇಕು ಎಂದು ನಿಂಗನಗೌಡ ಲಕ್ಕನಗೌಡ್ರ, ಅಲ್ಲಾಬಕ್ಷಿ ನದಾಫ್‌, ರಾಜೇಂದ್ರ ಜಕ್ಕಲಿ ಆಗ್ರಹಿಸಿದರು.

ಪತ್ರಿಕೆ ಹೇಳಿಕೆ ನೀಡಿರುವ ಅವರು, ಗ್ರಾಮೀಣ ಭಾಗದಲ್ಲಿ ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಜಿಲ್ಲಾಸ್ಪತ್ರೆಗೆ ಹೋದರೆ ಬೆಡ್‌ ಸಮಸ್ಯೆ ಇದೆ. ಆದ ಕಾರಣ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್‌ ಆರೈಕೆ ಕೇಂದ್ರ ಹಾಗೂ ವಾರ್‌ ರೂಂ ಸ್ಥಾಪನೆ ಮಾಡಿದರೆ ಗ್ರಾಮೀಣ ಬಡವರಿಗೆ ಅನಕೂಲವಾಗುತ್ತದೆ ಎಂದರು.

ನರೇಗಲ್‌ ಪಟ್ಟಣವು ಜಿಲ್ಲೆಗೆ ದೊಡ್ಡ ಹೋಬಳಿಯಾಗಿದ್ದು, ಜಕ್ಕಲಿ, ಹೊಸಳ್ಳಿ, ಕಳಕಾಪುರ, ನಿಡಗುಂದಿ, ನಿಡಗುಂದಿಕೊಪ್ಪ, ಹಾಲಕೆರೆ, ಮಾರನಬಸರಿ, ಅಬ್ಬಿಗೇರಿ, ಯರೇಬೆಲೇರಿ, ಕುರಡಗಿ, ಗುಜಮಾಗಡಿ, ಡ.ಸ.ಹಡಗಲಿ, ಕೋಚಲಾಪುರ, ತೋಟಗಂಟಿ, ಮಲ್ಲಾಪುರ, ದ್ಯಾಂಪುರ, ಬೂದಿಹಾಳ ಗ್ರಾಮಗಳನ್ನು ಒಳಗೊಂಡಿದೆ. ಈ ಎಲ್ಲಾ ಗ್ರಾಮಗಳ ಜನರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲೆ ಅವಲಂಬನೆ ಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಪಟ್ಟಣದ ಪ್ರಾಥಮಿಕ ಕೇಂದ್ರಕ್ಕೆ ಸಂಬಂಧಿಸಿದಂತೆ ಹಳೆಯ ಕಟ್ಟಡ ಹಾಗೂ ಹೊಸ ಕಟ್ಟಡ ಎಂದು ಎರಡು ಪ್ರತ್ಯೇಕ ಕಟ್ಟಡಗಳಿವೆ. ಅವುಗಳನ್ನು ಬಳಕೆ ಮಾಡಿಕೊಂಡು ಆರೈಕೆ ಕೇಂದ್ರ ಸ್ಥಾಪನೆ ಮಾಡಬೇಕು ಹಾಗೂ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಇದ್ದು ರೋಗಿಗಳು ಪರದಾಡುತ್ತಿದ್ದಾರೆ. ಆದ್ದರಿಂದ ಪಟ್ಟಣ ಪಂಚಾಯ್ತಿಯವರು ನೀರಿನ ವ್ಯವಸ್ಥೆಯನ್ನು ಮಾಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT