ಗಜೇಂದ್ರಗಡ: ಹಂಡೇವಜೀರ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ 2ಎ ಜಾತಿ-ಆದಾಯ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಮಂಗಳವಾರ ಎಸ್ಎಫ್ಐ ಕಾರ್ಯಕರ್ತರು ಹಾಗೂ ಸಮುದಾಯದ ವಿದ್ಯಾರ್ಥಿಗಳ ಪಾಲಕರು ತಹಶೀಲ್ದಾರ್ ಕಿರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

‘ರಾಜ್ಯದಲ್ಲಿ ಈಗಾಗಲೇ ಹಂಡೇವಜೀರ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರವರ್ಗ 2ಎ ಮೀಸಲಾತಿ ನೀಡಲಾಗುತ್ತಿದೆ. ಆದರೆ ಗಜೇಂದ್ರಗಡ ತಾಲ್ಲೂಕಿನಲ್ಲಿ ಮಾತ್ರ ವಿದ್ಯಾರ್ಥಿಗಳ ಜಾತಿ-ಆದಾಯದ ಅರ್ಜಿಗಳನ್ನು ತಿರಸ್ಕರಿಸಿ ಪ್ರವರ್ಗ 3ಬಿ ಮೀಸಲಾತಿ ನೀಡಲಾಗುತ್ತಿದೆ. ಸರ್ಕಾರ ಹಾಗೂ ರಾಜ್ಯಪಾಲರ ಆದೇಶದ ಉಲ್ಲಂಘನೆಯಾಗಿದ್ದು, ವಿದ್ಯಾರ್ಥಿಗಳನ್ನು ಶೈಕ್ಷಣಿಕ ಸೌಲಭ್ಯದಿಂದ ವಂಚಿಸುವ ಕ್ರಮವಾಗಿದೆ. ಹಂಡೇವಜೀರ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ಪ್ರವರ್ಗ 2ಎ ಮೀಸಲಾತಿ ನೀಡದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ತಹಶೀಲ್ದಾರ್ ಕಚೇರಿ ಎದುರು ಹೋರಾಟ ಕೈಗೊಳ್ಳಲಾಗುವುದು’ ಎಂದು ಸಂಘಟನೆ ಕಾರ್ಯಕರ್ತರು ಆಗ್ರಹಿಸಿದರು.

ಈ ವೇಳೆ ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರು ರಾಠೋಡ, ಅಂದನಗೌಡ ಪಾಟೀಲ, ಶರಣಗೌಡ ಪಾಟೀಲ, ವೀರಭದ್ರಗೌಡ ಪಾಟೀಲ, ನಿಂಗರಾಜ ಪಾಟೀಲ, ಚಂದ್ರಗೌಡ ಪಾಟೀಲ, ಅನಿಲ್ ರಾಠೋಡ, ಶರಣು ಮಾಟರಂಗಿ, ರಾಜು ಪಾಟೀಲ, ಕಳಕೇಶ ರಾಠೋಡ, ಚಂದ್ರಗೌಡ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.