ಗಜೇಂದ್ರಗಡ (ಗದಗ ಜಿಲ್ಲೆ): ರೋಣ ಮತಕ್ಷೇತ್ರದ ಶಾಸಕ ಜಿ.ಎಸ್.ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರು ಮೈಮೇಲೆ ಡೀಸೆಲ್ ಸುರಿದುಕೊಂಡು ಹೈಡ್ರಾಮ ನಡೆಸಿದರು.

ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ವೃತ್ತದ ಒಂದು ಬದಿಯಲ್ಲಿ ದಿಂಡೂರ ಗ್ರಾಮದ ಸಂಗಪ್ಪ ತೇಜಿ ಮೈಮೇಲೆ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಕಾರ್ಯಕರ್ತರು ಹಾಗೂ ಪೊಲೀಸರು ಆತನಿಂದ ಡೀಸೆಲ್ ಕ್ಯಾನ್ ಕಸಿಕುದಕೊಂಡು ಸಮಾಧಾನಪಡಿಸಿದರು.

ಪ್ರತಿಭಟನೆ ಮುಗಿದ ಬಳಿಕ ಮಾರನಬಸರಿ ಗ್ರಾಮದ ರವಿ ಅಬ್ಬಿಗೇರಿ ಕಾಲಕಾಲೇಶ್ವರ ವೃತ್ತದ ಮೇಲೆ ಹತ್ತಿ ಮೈಮೇಲೆ ಡೀಸೆಲ್ ಸುರಿದುಕೊಂಡರು. ತಕ್ಷಣ ಪೊಲೀಸರು ಆತನನ್ನು ತಡೆದರು.

ಆತ್ಮಹತ್ಯೆಗೆ ಯತ್ನಿಸಿದ ಸಂಗಪ್ಪ ಹಾಗೂ ರವಿ, ‘ನಮ್ಮ ನಾಯಕರಾದ ಜಿ.ಎಸ್.ಪಾಟೀಲರಿಗೆ ಪದೇ ಪದೇ ಅನ್ಯಾಯವಾಗುತ್ತಿದೆ. ಈ ಬಾರಿ ಸಚಿವ ಸ್ಥಾನ ನೀಡದಿದ್ದರೆ ಅವರಿಗಾಗಿ ಪ್ರಾಣ ನೀಡಲು ಸಿದ್ದರಿದ್ದೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.