ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆಯಲ್ಲಿ ಮಹದೇವಪ್ಪ ಹೆಸರು ಕೈಬಿಡಲು ಆಗ್ರಹ

Published 19 ಫೆಬ್ರುವರಿ 2024, 15:55 IST
Last Updated 19 ಫೆಬ್ರುವರಿ 2024, 15:55 IST
ಅಕ್ಷರ ಗಾತ್ರ

ಮುಂಡರಗಿ: ‘ಬರುವ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ.ಮಹದೇವಪ್ಪ ಅವರ ಹೆಸರನ್ನು ಕೈ ಬಿಡಬೇಕು’ ಎಂದು ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೇಲ್ವಿಚಾರಣಾ ಮತ್ತು ಬಲವರ್ಧನೆ ಸಮಿತಿ ಪ್ರಧಾನ ಕಾರ್ಯದರ್ಶಿ ಬಸವರಾಜ ಬೇವಿನಮರ ಒತ್ತಾಯಿಸಿದರು.

ಪಟ್ಟಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎಚ್.ಸಿ.ಮಹದೇವಪ್ಪ ಅವರು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಮೇಲೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಖಂಡಿತವಾಗಿ ಭಾರಿ ಬಹುಮತಗಳೊಂದಿಗೆ ಗೆಲ್ಲುತ್ತಾರೆ. ಆದರೆ ಅವರು ಲೋಕಸಭೆಗೆ ತೆರಳಿದರೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಆಗುತ್ತಿರುವ ಅಭಿವೃದ್ಧಿಗೆ ಕಾರ್ಯಗಳಿಗೆ ತೀವ್ರ ಹಿನ್ನೆಡೆಯಾಗಲಿದೆ. ಅವರ ಸೇವೆಯನ್ನು ರಾಜ್ಯಕ್ಕೆ ಮಾತ್ರ ಸೀಮಿತಗೊಳಿಸಬೇಕು’ ಎಂದು ವರಿಷ್ಠರಲ್ಲಿ ಮನವಿ ಮಾಡಿಕೊಂಡರು.

‘ನಮ್ಮ ಜನತೆಗೆ ಸಂವಿಧಾನದ ಮಹತ್ವ ತಿಳಿಯಲಿ, ಎಲ್ಲರಿಗೂ ಸಂವಿಧಾನದ ಮೇಲೆ ಗೌರವ ಮೂಡಲಿ ಎನ್ನುವ ಕಾರಣದಿಂದ ಮಹದೇವಪ್ಪನವರು ನಾಡಿನಾದ್ಯಂತ ಸಂವಿಧಾನ ಜಾಗೃತಿ ಜಾಥಾ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬ ನಾಗರಿಕರಿಗೆ ತಲುಪಿಸುವ ಮಹತ್ವದ ಕಾರ್ಯ ಯೋಜನೆಗಳನ್ನು ಹಾಕಿಕೊಂಡು ಎಲ್ಲರೂ ಮೆಚ್ಚುವಂತಹ ಕಾರ್ಯಗಳನ್ನು ಮಾಡುತ್ತಿದ್ದಾರೆ’ ಎಂದು ತಿಳಿಸಿದರು.

‘ಮಹದೇವಪ್ಪ ಅವರುನ್ನು ಲೋಕಸಭೆಗೆ ಕಳುಹಿಸಿದರೆ ರಾಜ್ಯದ ಶೋಷಿತ ವರ್ಗಗಳಿಗೆ ತುಂಬಾ ಅನ್ಯಾಯವಾಗಲಿದೆ. ಆದ್ದರಿಂದ ಕಾಂಗ್ರೆಸ್ ವರಿಷ್ಠರು ಕಾಂಗ್ರೆಸ್ ಸಂಭವನೀಯ ಪಟ್ಟಿಯಿಂದ ಮಹದೇವಪ್ಪ ಅವರ ಹೆಸರನ್ನು ಕೈಬಿಡಬೇಕು. ಇಲ್ಲದಿದ್ದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಅಡಿವೆಪ್ಪ ಚಲವಾದಿ, ಮನೋಹರ ಕಾಳೆ, ರಾಮಪ್ಪ ಚಲವಾದಿ, ದೇವಪ್ಪ ಚಲವಾದಿ, ಮಂಜುನಾಥ ಚಲವಾದಿ, ಪ್ರಮೋದ ಚಲವಾದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT