ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರಿಸುವ ಭರವಸೆ: ರವಿ ಗುಂಜೀಕರ

ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಸಚಿವ ಎಚ್‌.ಕೆ.ಪಾಟೀಲಗೆ ಮನವಿ
Published 12 ಜನವರಿ 2024, 16:16 IST
Last Updated 12 ಜನವರಿ 2024, 16:16 IST
ಅಕ್ಷರ ಗಾತ್ರ

ಗದಗ: ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಅವರಿಗೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ ಗುಂಜೀಕರ ನೇತೃತ್ವದ ನಿಯೋಗ ಶುಕ್ರವಾರ ಮನವಿ ಸಲ್ಲಿಸಿತು.

ಜ.6ರಂದು ನಡೆದ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಜ.8ರಂದು ನಡೆದ ಜಿಲ್ಲಾ ಕಾರ್ಯಕಾರಿಣಿ ಸಭೆಯ ತೀರ್ಮಾನದಂತೆ ನೌಕರರ ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿ ಸಲ್ಲಿಸಲಾಯಿತು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ ಗುಂಜೀಕರ ಮಾತನಾಡಿ, ‘ಏಳನೇ ವೇತನ ಆಯೋಗ ರಚನೆಯಾಗಿ ಒಂದೂವರೆ ವರ್ಷವಾಗಿದ್ದು, ಆದಷ್ಟು ಬೇಗ ಆಯೋಗದ ವರದಿಯನ್ನು ಜಾರಿಗೊಳಿಸಬೇಕು. ಚುನಾವಣೆ ಪೂರ್ವದಲ್ಲಿ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಎನ್‌ಪಿಎಸ್‌ ರದ್ದುಗೊಳಿಸಿ, ಒಪಿಎಸ್‌ ಜಾರಿಗೊಳಿಸಲು ಮನವಿ ಮಾಡಲಾಗಿದೆ’ ಎಂದು ತಿಳಿಸಿದರು.

‘ನೌಕರರು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು ಎಂಬ ಮನವಿಯನ್ನೂ ಸಲ್ಲಿಸಲಾಗಿದ್ದು, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದರು.

ಸಂಘದ ಗೌರವಾಧ್ಯಕ್ಷ ಬಸವರಾಜ ಬಳ್ಳಾರಿ, ಖಚಾಂಚಿ ಸತೀಶ ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿ ಕೆ.ಬಿ.ಕೊಣ್ಣೂರ, ಉಪಾಧ್ಯಕ್ಷ ಸಿದ್ದಪ್ಪ ಲಿಂಗದಾಳ, ಎಸ್.ಆರ್.ಬಂಡಿ, ಎಸ್.ಬೀರಕಬ್ಬಿ, ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎಂ.ಹಿರೇಮಠ, ಮೋಹನ ಮೆಣಸಿನಕಾಯಿ, ವಸಂತ ಕಲಾಲ, ಮಾನೆದ, ಅಸುಂಡಿ, ಹದ್ಲಿ, ಎಸ್.ಎಂ.ಹಿರೇಮಠ, ಹೊಂಬಳ, ಬೇಲೇರಿ, ಮುದಗಣ್ಣವರ, ಯರಗುಡಿ, ಸೋಮಣ್ಣವರ, ಚುರ್ಚಿಹಾಳ, ಕವಳಿಕಾಯಿ, ಸಂಗಳದ, ಗಾಡಗೋಳಿ, ಹಿರೇಹಾಳ, ಮಂಗಳಗುಡ್ಡ, ಕನಾಜ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT