ಗದಗ: ‘ಜಿಲ್ಲೆಯ ಎಲ್ಲಾ ವಸತಿಶಾಲೆಗಳ ಚಿತ್ರಕಲಾ ಶಿಕ್ಷಕರಿಂದ ಉತ್ತಮ ಚಿತ್ರಕಲೆಗಳು ಮೂಡಿಬರಲಿ. ಈ ಚಿತ್ರಗಳು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಮೆರುಗು ನೀಡುವಂತಿರಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ವಿಷಯ ಕುರಿತು ಗದಗ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರಿಗಾಗಿ ನಗರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ಏರ್ಪಡಿಸಿದ್ದ ಚಿತ್ರಕಲಾ ಶಿಬಿರಕ್ಕೆ ಭೇಟಿ ನೀಡಿ ಮಾತನಾಡಿದರು.

‘ಚಿತ್ರಕಲಾ ಶಿಕ್ಷಕರು ರಚಿಸುವ ಚಿತ್ರಗಳು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಕುರಿತು ಗೌರವ ಇಮ್ಮಡಿಗೊಳ್ಳಲು ಪ್ರೇರಣೆಯಾಗುವಂತಿರಬೇಕು’ ಎಂದು ಸಲಹೆ ನೀಡಿದರು.

ಚಿತ್ರಕಲಾ ಶಿಕ್ಷಕರು ತಮ್ಮದೇ ಶೈಲಿಯಲ್ಲಿ ಚಿತ್ರಗಳನ್ನು ರಚಿಸುವ ಮೂಲಕ ಗಮನ ಸೆಳೆದರು.

‘ನನ್ನ ಮತ ನನ್ನ ಹಕ್ಕು’, ‘ಭಾರತ ಸಂವಿಧಾನ’, ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’, ‘ನನ್ನ ಮತ ನನ್ನ ಭವಿಷ್ಯ’ ಹಾಗೂ ‘ಅಂಬೇಡ್ಕರ್ ಸಂವಿಧಾನ’ ವಿಷಯದ ಬಗ್ಗೆ ಕಲೆಯ ಮೂಲಕ ಬೆಳಕು ಚೆಲ್ಲಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ನಂದಾ ಹಣಬರಟ್ಟಿ ಸೇರಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಜಿಲ್ಲೆಯ ಚಿತ್ರಕಲಾ ಶಿಕ್ಷಕರು, ಇಲಾಖೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.