ಗದಗ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಬೇಕು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು 110ನೇ ಜನ್ಮದಿನಾಚರಣೆಗೆ ಸಂಬಂಧಿಸಿದಂತೆ ಪೂರ್ವಭಾವಿಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಅರಸು ಅವರ ಜನ್ಮದಿನಾಚರಣೆಯ ಅಂಗವಾಗಿ ಅವರ ಜೀವನ ಸಾಧನೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಪ್ರಬಂಧ, ಭಾಷಣ ಸ್ಪರ್ಧೆ ಆಯೋಜಿಸಬೇಕು’ ಎಂದು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಪಡಿಸಬೇಕು. ಶಿಷ್ಟಾಚಾರದ ಅನ್ವಯ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ ಗಣ್ಯರಿಗೆ ಮುಂಚಿತವಾಗಿ ತಲುಪಿಸಬೇಕು. ಕಾರ್ಯಕ್ರಮ ನಡೆಯುವ ದಿನದಂದು ರಾಣಿ ಚನ್ನಮ್ಮ ವೃತ್ತದಿಂದ ಕನಕ ಭವನದವರೆಗೆ ಮೆರವಣಿಗೆ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಕಾರ್ಯಕ್ರಮದ ನಿರೂಪಕರು ಹಾಗೂ ಡಿ.ದೇವರಾಜ ಅರಸು ಅವರ ಜೀವನಗಾಥೆಯನ್ನು ಸವಿವರವಾಗಿ ತಿಳಿಸಬಲ್ಲ ನುರಿತ ಉಪನ್ಯಾಸಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು’ ಎಂದು ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಬಸವರಾಜ ಬಳ್ಳಾರಿ ಮಾತನಾಡಿ, ‘ಡಿ.ದೇವರಾಜ ಅರಸು ಜನ್ಮದಿನಾಚರಣೆ ಅಂಗವಾಗಿ ಗದಗ ಜಿಲ್ಲೆಯಲ್ಲಿ ಇರುವ ಎಲ್ಲ ವಸತಿನಿಲಯಗಳಲ್ಲಿನ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ರಂಗೋಲಿ ಸ್ಪರ್ಧೆ ಮತ್ತು ಒಳಾಂಗಣ ಕ್ರೀಡೆಗಳನ್ನು ನಡೆಸಿಕೊಡಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್., ಸಮಾಜದ ಹಿರಿಯರಾದ ಫಕೀರಪ್ಪ ಹೆಬಸೂರು, ಆರ್.ಡಿ.ಕಡ್ಲಿಕೊಪ್ಪ, ಎಸ್.ಮಲ್ಲಿಕಾರ್ಜುನ, ರುದ್ರಣ್ಣ ಗುಳಗುಳಿ, ಹರೀಶ್ ಪೂಜಾರ್, ಮೋಹನ್ ಚಂದಪ್ಪನವರ್, ಶಿವಪ್ಪ ಮಡಿವಾಳ, ಧಾಮಣ್ಣ ಮಡಿವಾಳರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು
ಎಂ.ಎಂ.ತುಂಬರಮಟ್ಟಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.