ಭಾನುವಾರ, ಜುಲೈ 3, 2022
23 °C
ಶಾಲಾ ಕೊಠಡಿ ಉದ್ಘಾಟಿಸಿದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ

₹ 1 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನರಗುಂದ: ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಕಲಿಸುವ ಮೂಲಕ ಶಿಕ್ಷಣ ನೀಡಬೇಕು. ಮಕ್ಕಳಿಗೆ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿ ಮಾಡಿ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ತಾಲ್ಲೂಕಿನ ಬೂದಿಹಾಳ ನವಗ್ರಾಮದಲ್ಲಿ ಶನಿವಾರ ಸಂಜೆ ನಡೆದ ಶಾಲಾ ಕೊಠಡಿಗಳ ಉದ್ಘಾಟನೆ ಹಾಗೂ ಎಸ್ಸಿ ಕಾಲೊನಿಯಲ್ಲಿ ತಡೆಗೋಡೆ ನಿರ್ಮಾಣ, ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜಾ ಸಮಾರಂಭದಲ್ಲಿ ಮಾತನಾಡಿದರು.

ಶಾಲಾ ಕೊಠಡಿಗಳನ್ನು ಉದ್ಘಾಟಿಸುವ ಮೂಲಕ ಪವಿತ್ರ ಕಾರ್ಯ ಮಾಡಲಾಗಿದೆ. ಇಲ್ಲಿ ಕಲಿತ ಮಕ್ಕಳು ತಮ್ಮ ಜೀವನ ರೂಪಿಸಿಕೊಳ್ಳುವ ಹಾಗೆ ಶಿಕ್ಷಣ ನೀಡಬೇಕು ಎಂದರು. ಕೋವಿಡ್ ನಿರಂತರ ನೋವು ನೀಡಿದೆ. ಈಗಷ್ಟೇ ಆರ್ಥಿಕ ಸಬಲತೆ ಬರುತ್ತಿದೆ. ಅದರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಹಾಯದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಬಹುದಿನದ ಬೇಡಿಕೆಯಾಗಿದ್ದ ತಡೆಗೋಡೆ ನಿರ್ಮಾಣ ಹಾಗೂ ಸಿಸಿರಸ್ತೆಯನ್ನು ₹ 70 ಲಕ್ಷದಲ್ಲಿ ನಿರ್ಮಿಸಲಾಗುತ್ತಿದೆ ಎಂದರು.

ಬೂದಿಹಾಳ ಗ್ರಾಮದ ಅಭಿವೃದ್ಧಿಗೆ ಆದ್ಯತೆ ಮೇರೆಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು. ಬಿಜೆಪಿ ಮುಖಂಡರಾದ ಚಂದ್ರು ದಂಡಿನ, ಪ್ರಕಾಶಗೌಡ ತಿರಕನಗೌಡ್ರ, ಬಾಬು ಹಿರೆಹೊಳಿ, ಕೊಟ್ರೇಶ್ ಕೊಟ್ಟೂರಶೆಟ್ರ ಮಾತನಾಡಿದರು.

ಕೊಣ್ಣೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೂಳಪ್ಪ ಹುಜರತ್ತಿ, ಎಸ್‌ಡಿಎಂಸಿ ಅಧ್ಯಕ್ಷ ಗೋವಿಂದಗೌಡ ಪಾಟೀಲ, ಎನ್.ಕೆ.ಸೋಮಾಪುರ, ಎ.ಎಂ.ಹುಡೇದ, ಎಸ್.ಆರ್.ಯಲ್ಲಪ್ಪಗೌಡ್ರ, ಎಂ.ಎಚ್.ತಿಮ್ಮನಗೌಡ್ರ, ಕೃಷ್ಣಪ್ಪ ಚವ್ಹಾಣ, ಹನುಮಂತಗೌಡ ಪಾಟೀಲ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು,.ಬೂದಿಹಾಳ ಗ್ರಾಮಸ್ಥರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು