ನರೇಗಲ್: ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಜನರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು.

ಸಮೀಪದ ಕಳಕಾಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಯೋಜನೆಯಡಿ ನಿರ್ಮಿಸಲಾದ ಮನೆಯನ್ನು ಶಾಹಿದಾ ಬಾನು ಅವರಿಗೆ ಬುಧವಾರ ಹಸ್ತಾಂತರಿಸಿ ಮಾತನಾಡಿದರು.

‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಯೋಜನೆಯಡಿ ಈವರೆಗೆ 700ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲಾಗಿದೆ. ಜೊತೆಗೆ 24,800 ವಾತ್ಸಲ್ಯ ಕಿಟ್, 80,392 ಜನರಿಗೆ ಮಾಸಾಶನ ನೀಡಲಾಗಿದೆ. ಕೆರೆಗಳ ಪುನಶ್ಚೇತನ, ದೇವಸ್ಥಾನಗಳ ಅಭಿವೃದ್ಧಿ ಮಾಡಲಾಗುತ್ತಿದೆ’ ಎಂದರು.

ಜಿಲ್ಲಾ ಜನಜಾಗೃತಿ ಸದಸ್ಯ ಜಗದೀಶ ಕರಡಿ, ತಾಲ್ಲೂಕು ಯೋಜನಾಧಿಕಾರಿ ಮಹಾಬಲೇಶ ಪಟಗಾರ, ಕಳಕಪ್ಪ ರಾಜೂರ, ಅಲ್ಲಾಸಾಬ ಹೂಲಗೇರಿ, ನಜೀಮ ಮನ್ನಾಪುರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-23-741689747

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.