ಶನಿವಾರ, ಡಿಸೆಂಬರ್ 5, 2020
25 °C

ಚಕ್ರವ್ಯೂಹದಲ್ಲಿ ಸಿಲುಕಿರುವ ಡಿಕೆಶಿ: ಸಚಿವ ಶ್ರೀರಾಮುಲು ಲೇವಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸ್ಥಿತಿ ಈಗ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಭಿಮನ್ಯುವಿನಂತಾಗಿದೆ’ ಎಂದು ಸಚಿವ ಶ್ರೀರಾಮುಲು ಇಲ್ಲಿ ಲೇವಡಿ ಮಾಡಿದರು.

ಗದಗದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಈಗ ಡಿ.ಕೆ.ಶಿವಕುಮಾರ್‌ ಅವರಿಗೆ ನಿಜವಾದ ಸವಾಲು ಎದುರಾಗಿದೆ. ಸಹೋದರ ಡಿ.ಕೆ.ಸುರೇಶ್‌ ಅವರ ಕ್ಷೇತ್ರವ್ಯಾಪ್ತಿಗೆ ಒಳಪಡುವ ಆರ್‌.ಆರ್‌.ನಗರ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕಾದ ಅನಿವಾರ್ಯತೆ ಇದೆ’ ಎಂದು ಹೇಳಿದರು.

‘ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸೋತರೆ ಭಾರಿ ಮುಖಭಂಗವಾಗಲಿದೆ. ಸಹೋದರನ ಕ್ಷೇತ್ರದಲ್ಲೇ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲಾಗದಿದ್ದವರು, ರಾಜ್ಯದಲ್ಲಿ  ಪಕ್ಷವನ್ನು ಹೇಗೆ ಗೆಲ್ಲಿಸುತ್ತಾರೆ ಎಂದು ಅವರ ಪಕ್ಷದವರೇ ಮಾತನಾಡಿಕೊಳ್ಳುತ್ತಾರೆ. ಅವರಿಗೀಗ ಹತಾಶಭಾವ ಕಾಡುತ್ತಿದ್ದು ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು