ಚರಂಡಿಗಳ ಸ್ವಚ್ಛತೆಗೆ ಗಮನ ಹರಿಸಿ
‘ಮಳೆಗಾಲದಲ್ಲಿ ಚರಂಡಿಗಳ ಸ್ವಚ್ಛತೆಗೆ ಗಮನ ಹರಿಸಬೇಕು. ಮಳೆನೀರು ಚರಂಡಿ ಹಾಗೂ ಪ್ರಮುಖ ಕಾಲುವೆಗಳ ಮೂಲಕ ಸರಾಗವಾಗಿ ಮುಂದೆ ಸಾಗಲು ಅನುವಾಗುವಂತೆ ಚರಂಡಿಗಳಲ್ಲಿ ಗಿಡ ಪ್ಲಾಸ್ಟಿಕ್‌ವಸ್ತುಗಳನ್ನು ತೆರವುಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚಿಸಿದರು. ತಗ್ಗುಪ್ರದೇಶಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ತಿಳಿಸಿದರು.