ಗದಗ: ‘ಸ್ವಚ್ಛತೆಯ ಪರಿಕಲ್ಪನೆ ಹಳ್ಳಿಗಳಿಂದ ಆರಂಭಗೊಂಡು, ತಾಲ್ಲೂಕು, ಜಿಲ್ಲೆ, ರಾಜ್ಯದಿಂದ ದೇಶದಾದ್ಯಂತ ವಿಸ್ತರಣೆ ಆಗಬೇಕು. ಆರೋಗ್ಯಪೂರ್ಣ ಬದುಕಿಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಪ್ರಮುಖವಾಗಿದೆ’ ಎಂದು ಗದಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿ.ಎಂ. ಪಾಟೀಲ ಹೇಳಿದರು.

ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಗದಗ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ, ಧಾರವಾಡದ ಕೆಸಿಸಿ ಬ್ಯಾಂಕ್, ಕೆಎಂಎಫ್ ಧಾರವಾಡ ಹಾಗೂ ಗದಗ ಜಿಲ್ಲೆಯ ಸಹಕಾರ ಸಂಘ, ಬ್ಯಾಂಕ್ಗಳ ಸಂಯುಕ್ತ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸಹಕಾರ ವರ್ಷಾಚರಣೆ ಅಂಗವಾಗಿ ನಗರದ ಪಿ.ಬಿ. ರಸ್ತೆಯಲ್ಲಿ ಆಯೋಜಿಸಿದ್ದ ‘ಸಹಕಾರದಿಂದ ಸ್ವಚ್ಛತಾ ಅಭಿಯಾನ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ನಾವೆಲ್ಲರೂ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ನಮ್ಮ ಗ್ರಾಮ, ಪಟ್ಟಣ, ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿ’ ಎಂದರು.

ಅಂತರರಾಷ್ಟ್ರೀಯ ಸಹಕಾರ ವರ್ಷದ ಅಂಗವಾಗಿ ಗದಗ ಜಿಲ್ಲೆಯಲ್ಲಿ ಮಹಾಮಂಡಳದ ಮಾರ್ಗದರ್ಶನದಂತೆ ‘ಸಹಕಾರದಿಂದ ಸ್ವಚ್ಛತಾ ಅಭಿಯಾನ’ ಆರಂಭಿಸಲಾಗಿದ್ದು, ಜೂನ್ನಲ್ಲಿ ‘ಏಕ್ ಪೇಡ್ ಮಾ ಕಿ ನಾಮ್ಸೇ’ ಹೆಸರಿನಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಆ ಕಾರ್ಯಕ್ರಮದಲ್ಲಿ ಕೂಡ ಇದೇ ರೀತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಧಾರವಾಡದ ಕೆಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಫ್.ಕಲಗುಡಿ ಮಾತನಾಡಿ, ‘ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಸ್ವಚ್ಛ ಭಾರತ್ ಅಭಿಯಾನ 2014ರ ಅ. 2ರಂದು ಪ್ರಾರಂಭಗೊಂಡಿದೆ. ಕೇಂದ್ರ ಸರ್ಕಾರವು 2025ನೇ ವರ್ಷವನ್ನು ಅಂತರರಾಷ್ಟ್ರೀಯ ಸಹಕಾರ ವರ್ಷ ಎಂದು ಘೋಷಿಸಿದ್ದು, ‘ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು’ ಎಂಬ ಘೋಷವಾಕ್ಯದಂತೆ ಸ್ವಚ್ಛತಾ ಅಭಿಯಾನ ನಡೆಸಲಾಗುತ್ತಿದೆ’ ಎಂದರು.

ಗದಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಸ್.ಕೆ.ಕುರಡಗಿ, ಗದಗ ಮರ್ಚೆಂಟ್ಸ್ ಅರ್ಬನ್ ಬ್ಯಾಂಕ್ ಲಿ. ಅಧ್ಯಕ್ಷ ಕೆ.ಎಸ್.ಚಟ್ಟಿ, ಸಹಕಾರ ಸಂಘಗಳ ಉಪನಿಬಂಧಕಿ ಎಸ್.ಎಸ್.ಕಬಾಡೆ, ಸಹಕಾರ ಅಭಿವೃದ್ಧಿ ಅಧಿಕಾರಿಗಳಾದ ಪ್ರಶಾಂತ ಮುಧೋಳ, ಕೆ.ಸಿ.ಕೂಸನೂರಮಠ, ಪ್ರಕಾಶ ನವಲಗುಂದ, ಗದಗ ಕೆಸಿಸಿ ಬ್ಯಾಂಕ್ ವ್ಯವಸ್ಥಾಪಕಿ ಆರ್.ಎಸ್.ಕಟ್ಟಿ, ಪ್ರಭಾರ ಜಿಲ್ಲಾ ನಿಯಂತ್ರಣಾಧಿಕಾರಿ ಎಸ್.ವಿ.ಚಳಗೇರಿ ಹಾಗೂ ಧಾರವಾಡ ಹಾಲು ಒಕ್ಕೂಟದ ಜಿಲ್ಲಾ ಮುಖ್ಯಸ್ಥ ಪ್ರಸನ್ನ ಪಟ್ಟೇದ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕಿನ ವಿಸ್ತರಣಾಧಿಕಾರಿಗಳು ಭಾಗವಹಿಸಿದ್ದರು.

ಸ್ವಚ್ಛತಾ ಅಭಿಯಾನದ ಬಳಿಕ ನಡೆದ ತರಬೇತಿ ಕಾರ್ಯಾಗಾರದಲ್ಲಿ ಉಪನ್ಯಾಸಕ ಬಸವರಾಜ ಮಲ್ಲಾಪುರ, ‘ಸ್ವಚ್ಛತೆ, ನೈರ್ಮಲ್ಯ, ಮಾಲಿನ್ಯ, ಪರಿಸರ ಕಾಪಾಡುವಲ್ಲಿ ಪ್ರಜೆಗಳ ಪಾತ್ರ, ಸಾಮಾಜಿಕ ಜವಾಬ್ದಾರಿ’ ಕುರಿತು ಉಪನ್ಯಾಸ ನೀಡಿದರು.

ಗದಗ ಜಿಲ್ಲಾ ಸಹಕಾರ ಯೂನಿಯನ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಎಸ್. ಕರಿಯಪ್ಪನವರ ಕಾರ್ಯಕ್ರಮ ನಿರೂಪಿಸಿದರು. ಸಹಕಾರ ಶಿಕ್ಷಕಿ ರಶೀದಾಬಾನು ಸಿ. ಯಲಿಗಾರ ವಂದಿಸಿದರು.

ಜಿಲ್ಲೆಯಲ್ಲಿರುವ ಎಲ್ಲ ಸಹಕಾರ ಸಂಘಗಳು ತಮ್ಮ ಸಂಸ್ಥೆ ಸರ್ಕಾರಿ ರಸ್ತೆ ಆಟದ ಮೈದಾನ ಉದ್ಯಾನ ಹಾಗೂ ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ವರ್ಷಪೂರ್ತಿ ಸ್ವಚ್ಛತಾ ಅಭಿಯಾನ ನಡೆಸಬೇಕು
ಎಂ.ಎಫ್. ಕಲಗುಡಿ ಧಾರವಾಡದ ಕೆಸಿಸಿ ಬ್ಯಾಂಕ್ ನಿರ್ದೇಶಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.