ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರದ ಯೋಜನೆ ಬಡವರಿಗೆ ತಲುಪಲಿ

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ರಾಜಶೇಖರ ವೆಂಕನಗೌಡ ಪಾಟೀಲ
Last Updated 27 ಸೆಪ್ಟೆಂಬರ್ 2020, 3:08 IST
ಅಕ್ಷರ ಗಾತ್ರ

ಗದಗ: ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ನೀಡಿ ಅವರನ್ನು ಬಲಗೊಳಿಸುವುದೇ ಬಡತನ ನಿರ್ಮೂಲನಾ ಯೋಜನೆಗಳ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ರಾಜಶೇಖರ ವೆಂಕನಗೌಡ ಪಾಟೀಲ ಹೇಳಿದರು.

ಗದಗ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಬಡತನ ನಿರ್ಮೂಲನಾ ಯೋಜನೆ ಪರಿಣಾಮಕಾರಿ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಡತನ ನಿರ್ಮೂಲನೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅರ್ಹ ಫಲಾನುಭವಿಗಳಿಗೆ ಯೋಜನೆಗಳು ತಲುಪಬೇಕು. ಸರ್ಕಾರದ ಯೋಜನೆಗಳ ಸದುಪಯೋಗದೊಂದಿಗೆ ಬಡತನ ನಿರ್ಮೂಲನೆ ಆಗಬೇಕು ಎಂದು ಹೇಳಿದರು.

ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಗ್ರಾಮ ಮಟ್ಟದಲ್ಲಿ ಯೋಜನೆಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಹಕ್ಕು ಮತ್ತು ಸೌಲಭ್ಯಗಳ ಅವಕಾಶ ದೊರಕಿಸಿ ಕೊಡಬೇಕು ಎಂದು ಹೇಳಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ.ಸಲಗರೆ ಮಾತನಾಡಿ, ಬಡತನವು ವಿವಿಧ ಸ್ವರೂಪದಲ್ಲಿರುತ್ತದೆ. ಅದು ಕೇವಲ ವರಮಾನಕ್ಕಷ್ಟೇ ಸೀಮಿತವಲ್ಲ ಎಂಬ ತಳಹದಿಯ ಮೇಲೆ ಯೋಜನೆ ರೂಪಿಸಲಾಗಿದೆ ಎಂದರು.

ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ಹೋಬಳಿ ಮಟ್ಟದಲ್ಲಿ ಪ್ರತಿ ತಿಂಗಳು ಕಂದಾಯ ಅದಾಲತ್ ಹಾಗೂ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ವಯೋವೃದ್ಧರ ಅಲೆದಾಟ ತಪ್ಪಿಸುವ ಕಾರಣಕ್ಕಾಗಿ ಆಧಾರ್ ಆಧಾರದ ಮೇಲೆ ಪಿಂಚಣಿದಾರರನ್ನು ಗುರುತಿಸಲಾಗುತ್ತಿದೆ. ಸಕಾಲಕ್ಕೆ ಅನುದಾನ ಬಿಡುಗಡೆ ಆಗುತ್ತಿದ್ದು, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲಾಗುವುದು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಂ.ವಿ.ನರಸಿಂಹಸಾ, ಗದಗ ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT