ಗದಗ: ‘ಜಿಲ್ಲೆಯಾದ್ಯಂತ ಕಸದ ನಿರ್ವಹಣೆ ಸಮರ್ಪಕ ಇಲ್ಲದಿರುವುದು ಬೀದಿನಾಯಿಗಳ ಹೆಚ್ಚುವುದಕ್ಕೆ ಪ್ರಮುಖ ಕಾರಣವಾಗಿದೆ. ಮಾರುಕಟ್ಟೆ, ಹೋಟೆಲ್ಗಳು, ಮಾಂಸದ ಅಂಗಡಿಗಳು, ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯವನ್ನು ಮುಚ್ಚಿದ ಡಬ್ಬಿಗಳಲ್ಲಿ ಸಂಗ್ರಹಿಸುವ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸಬೇಕು. ನಿಯಮ ಉಲ್ಲಂಘಿಸುವವರಿಗೆ ಸ್ಥಳೀಯ ಸಂಸ್ಥೆಗಳು ದಂಡ ವಿಧಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚಿಸಿದರು.

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿ ನಿಯಂತ್ರಣ ಕುರಿತು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯಲ್ಲಿ ಬೀದಿನಾಯಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಬೀದಿನಾಯಿ ಜನನ ನಿಯಂತ್ರಣ ಕಾರ್ಯಕ್ರಮವನ್ನು ಹಂತ ಹಂತವಾಗಿ ಜಾರಿಗೆ ತರಲು ಅವರು ಸಂಬಂಧಪಟ್ಟ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು’ ಎಂದರು.

‘ಬೀದಿನಾಯಿಗಳಿಂದ ಮಕ್ಕಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ಅಪಾಯ ಆಗಿರುವ ಘಟನೆಗಳು ಜಿಲ್ಲೆಯ ವಿವಿಧೆಡೆ ನಡೆದಿವೆ. ಈ ಹಿನ್ನಲೆಯಲ್ಲಿ ಸಮಸ್ಯೆ ಗಂಭೀರವಾಗುವ ಮುನ್ನ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

‘ಶಾಲೆಗಳು, ಆಂಗನವಾಡಿಗಳು, ಗ್ರಾಮ ಸಭೆಗಳು, ಮಹಿಳಾ ಸಂಘಗಳ ಮೂಲಕ ನಾಯಿ ಕಚ್ಚಿದರೆ ತಕ್ಷಣ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ರೇಬಿಸ್ ಲಸಿಕೆಯ ಮಹತ್ವ ಕುರಿತು ಜಾಗೃತಿ ಮೂಡಿಸಬೇಕು’ ಎಂದು ಸೂಚಿಸಿದರು.

ಬೀದಿನಾಯಿಗಳನ್ನು ಸುರಕ್ಷಿತವಾಗಿ ವಶಪಡಿಸಿಕೊಳ್ಳಲು ವಿಶೇಷ ತಂಡ ರಚನೆ, ಅವುಗಳಿಗೆ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ, ರೇಬಿಸ್ ಲಸಿಕೆ, ಆರೋಗ್ಯ ತಪಾಸಣೆ ನಡೆಸಿ, ಗುರುತು ಹಾಕಿ ಹಿಂದಿರುಗಿ ಬಿಡುವ ಬಗ್ಗೆ ಪ್ರಾಥಮಿಕ ತೀರ್ಮಾನ ಕೈಗೊಳ್ಳಲಾಯಿತು.

ಜತೆಗೆ ಹುಚ್ಚುನಾಯಿ ಶಂಕೆ ಇರುವ ನಾಯಿಗಳನ್ನು ಪ್ರತ್ಯೇಕವಾಗಿ ವಶಕ್ಕೆ ಪಡೆದು ಅಗತ್ಯ ವೈದ್ಯಕೀಯ ಪರೀಕ್ಷೆ ನಡೆಸಬೇಕು ಎಂದು ನಿರ್ದೇಶನ ನೀಡಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್.ನೀಲಗುಂದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಪಶುಸಂಗೋಪನಾ ಇಲಾಖೆ ಉಪ ನಿರ್ದೇಶಕ ಡಾ. ಎಚ್.ಬಿ.ಹುಲಗಣ್ಣವರ, ಜಿಲ್ಲಾ ಪಂಚಾಯಿತಿ ಸಹ ಕಾರ್ಯದರ್ಶಿ ಶಿವಾನಂದ ಕಲ್ಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Quote - ಬೀದಿನಾಯಿಗಳ ನಿಯಂತ್ರಣವೆಂದರೆ ಅವುಗಳನ್ನು ಕೊಲ್ಲುವುದಲ್ಲ; ಮಾನವೀಯ ನೆಲೆ ಮತ್ತು ಕಾನೂನುಬದ್ಧರೀತಿಯಲ್ಲಿ ಜನರ ಜೀವ ಆರೋಗ್ಯ ಸುರಕ್ಷತೆ ಕಾಪಾಡುವುದಾಗಿದೆ ಸಿ.ಎನ್.ಶ್ರೀಧರ್ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.