ಭಾನುವಾರ, ಜುಲೈ 3, 2022
24 °C

ಗದಗ: ಅಧ್ಯಕ್ಷ ಅಶೋಕ ಪುನರಾಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯ ಫಲಿತಾಂಶ ಗುರುವಾರ ‍‍‍ಪ್ರಕಟಗೊಂಡಿದ್ದು, ಅಶೋಕ ಮಂದಾಲಿ ಕಳೆದ ಸಾಲಿಗಿಂತಲೂ ಹೆಚ್ಚಿನ ಮತಗಳನ್ನು ಪಡೆಯುವ ಜತೆಗೆ ಎರಡನೇ ಬಾರಿಗೆ ‍ಪುನರಾಯ್ಕೆ ಆಗಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹುದ್ದೆಗಳಿಗೆ ಜ.11ರಂದು ಆನ್‍ಲೈನ್ ಮೂಲಕ ಮತದಾನ ನಡೆದಿತ್ತು.

ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಾಲಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಮಂದಾಲಿ ಜತೆ ಕಣದಲ್ಲಿದ್ದ ಮತ್ತೊಬ್ಬ ಅಭ್ಯರ್ಥಿ ಉದಯಗೌಡ ವೀರನಗೌಡ್ರ ಅವರಿಗೆ 409 ಮತ ಲಭಿಸಿದ್ದು, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ವಿಜಯಕುಮಾರ ಚಲವಾದಿ ಪರಿಶಿಷ್ಟ ಜಾತಿಗೆ ಮೀಸಲಿದ್ದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

‘ಹಿಂದಿನ ಅವಧಿಯಲ್ಲಿ ನನ್ನನ್ನು ಆಯ್ಕೆ ಮಾಡಿದ್ದ ಯುವಕರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದೆ. ಜತೆಗೆ ಪಕ್ಷದ ಕಾರ್ಯಚಟುವಟಿಕೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದು ಮತ್ತೊಂದು ಬಾರಿ ಆಯ್ಕೆಯಾಗಲು ನೆರವಾಯಿತು’ ಎಂದು ಅಶೋಕ ಮಂದಾಲಿ ಪ್ರತಿಕ್ರಿಯಿಸಿದ್ದಾರೆ. 

‘ಯುವ ಕಾಂಗ್ರೆಸ್‌ ಪಕ್ಷದ ದೊಡ್ಡ ಶಕ್ತಿಯಾಗಿದೆ. ಪಕ್ಷದಲ್ಲಿನ ಯುವಕರಲ್ಲಿ ಆಂತರಿಕ ಪ್ರಜಾಪ್ರಭುತ್ವದ ಕಲ್ಪನೆಯ ಸಾಕಾರದೊಂದಿಗೆ ಪಕ್ಷ ಸಂಘಟನೆಯಲ್ಲಿ ನಿರಂತರವಾಗಿ ಶ್ರಮಿಸಿದವರನ್ನು ಆಯ್ಕೆ ಮಾಡುವ ಉದ್ದೇಶ ಹೊಂದಲಾಗಿತ್ತು.ಅದರಂತೆ ಆನ್‍ಲೈನ್ ಮತದಾನ ನಡೆದಿದೆ’ ಎಂದು ಕೆಪಿಸಿಸಿ ವಕ್ತಾರ ಡಿ.ಆರ್.ಪಾಟೀಲ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು