ಲಕ್ಷ್ಮೇಶ್ವರ (ಗದಗ ಜಿಲ್ಲೆ): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಲಕ್ಷ್ಮೇಶ್ವರ ತಾಲ್ಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಭಾನುವಾರ ದಿಢೀರ್ ಭೇಟಿ ನೀಡಿ ವೀರಗಂಗಾಧರ ಶಿವಾಚಾರ್ಯ ಸ್ವಾಮೀಜಿಯವರ ಗದ್ದುಗೆಗೆ ಸಂಕಲ್ಪ ಸಹಿತ ವಿಶೇಷ ಪೂಜೆ ಸಲ್ಲಿಸಿದರು.

‘ಮುಕ್ತಿಮಂದಿರವು ವಿಶೇಷ ಮತ್ತು ಪವಿತ್ರ ಸ್ಥಳವಾಗಿದ್ದು, ನಾನು ಬಹುವಾಗಿ ನಂಬಿರುವ ವೀರಗಂಗಾಧರ ಅಜ್ಜಯ್ಯ ಇಲ್ಲಿ ನೆಲಸಿದ್ದಾರೆ. ರಾಜಕೀಯ ಏನೇ ಇರಲಿ, ಮನುಷ್ಯನಿಗೆ ಸಂಸ್ಕಾರ ಮತ್ತು ಧರ್ಮ ಮುಖ್ಯ. ಧರ್ಮ ನಮ್ಮನ್ನು ಕಾಪಾಡುತ್ತದೆ. ನಾನು ಕೂತಿರುವ ಜಾಗ ಶಕ್ತಿ ಸ್ಥಳವಾಗಿದ್ದು, ಎಲ್ಲದಕ್ಕೂ ಸಮಯ ಉತ್ತರ ಕೊಡುತ್ತದೆ’ ಎಂದು ಸೂಚ್ಯವಾಗಿ ಹೇಳಿದರು.

‘ಅಜ್ಜಯ್ಯನ ಆಶಯದಂತೆ ಕ್ಷೇತ್ರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಬೇಕಿದೆ. ಕೆಲವರು ಇಷ್ಟಾನುಸಾರವಾಗಿ ಲಿಂಗ ಕೊಟ್ಟಿದ್ದಾರೆ. ನಾನು ಕೂಡ ಇದರ ಜವಾಬ್ದಾರಿ ತೆಗೆದುಕೊಂಡಿದ್ದೇನೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-14-1182156180

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.