ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಡಿಎಸ್ಎಸ್ ಬೆಂಬಲ

Published : 26 ಸೆಪ್ಟೆಂಬರ್ 2024, 16:10 IST
Last Updated : 26 ಸೆಪ್ಟೆಂಬರ್ 2024, 16:10 IST
ಫಾಲೋ ಮಾಡಿ
Comments

ಗದಗ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗದಗ ತಹಶೀಲ್ದಾರ್ ಕಚೇರಿ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಂಬಲ ವ್ಯಕ್ತಪಡಿಸಿದೆ.

ಸಮಿತಿಯ ಗದಗ ಜಿಲ್ಲಾ ಪ್ರಧಾನ ಸಂಚಾಲಕ ಬಾಲರಾಜ್ ಅರಬರ ಮಾತನಾಡಿ, ‘ಗ್ರಾಮ ಆಡಳಿತ ಅಧಿಕಾರಗಳ ಬೇಡಿಕೆಗಳು ನ್ಯಾಯಯುತವಾಗಿವೆ. ಸರ್ಕಾರ ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಈಡೇರಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಸಮಿತಿ ಅಧ್ಯಕ್ಷ ರಮೇಶ್ ಚಲವಾದಿ ಮಾತನಾಡಿ, ‘ಗ್ರಾಮ ಆಡಳಿತ ಅಧಿಕಾರಿಗಳು ಕಂದಾಯ ಇಲಾಖೆ ಅಭಿವೃದ್ಧಿಪಡಿಸಿದ ಗರುಡ ಆ್ಯಪ್‌, ಇ–ಆಫೀಸ್‌, ಲ್ಯಾಂಡ್‌ ಬೀಟ್‌, ಸಿ–ವಿಜಿಲ್‌ ಆ್ಯಪ್‌, ಪಿಎಂ ಕಿಸಾನ್‌ ವೆಬ್‌ ಆಪ್‌, ದಿಶಾಂಕ್‌ ಸೇರಿದಂತೆ ಇನ್ನೂ ಹಲವಾರು ಮೊಬೈಲ್, ವೆಬ್‌ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರು ಸಿ ವೃಂದದ ನೌಕರರಿಗಿಂತ ಹತ್ತು ಪಟ್ಟು ಕೆಲಸಗಳ ಜವಾಬ್ದಾರಿ ನಿರ್ವಹಿಸುತ್ತಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನೀಡಬೇಕು ಎಂದು ಆಗ್ರಹವನ್ನು ಸರ್ಕಾರ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು. ಸಿದ್ದಾರೆ.

ಜತೆಗೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ ಹಾಗೂ ಮೂಲಸೌಕರ್ಯ ಒದಗಿಸಬೇಕು ಎಂಬ ಅವರ ಬೇಡಿಕೆ ಈಡೇರಿಸಬೇಕು ಎಂದು ಹೇಳಿದರು.

ದಸಂಸ ಒಕ್ಕೂಟದ ಅಧ್ಯಕ್ಷ ನಾಗರಾಜ್ ಗೋಕಾವಿ, ಮುತ್ತಪ್ಪ ಭಜಂತ್ರಿ, ಕೆಂಚಪ್ಪ ಮ್ಯಾಗೇರಿ, ಸಂತೋಷ್ ಬಣಕಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT