ಗಜೇಂದ್ರಗಡ: ಸಮೀಪದ ರಾಜೂರ ಗ್ರಾಮದಲ್ಲಿ ಬುಧವಾರ ದಸರಾ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ದುರ್ಗಾದೇವಿ ಪುರಾಣ ಮಹಾಮಂಗಲ ಹಾಗೂ ದುರ್ಗಾದೇವಿ ನೂತನ ರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಗ್ರಾಮದ ದುರ್ಗಾದೇವಿ ದೇವಸ್ಥಾನದಲ್ಲಿ ಶಕ್ತಿ ದೇವತೆಯ ಘಟಸ್ಥಾಪನೆ ಹಾಗೂ ದೇವಿಯ ಪುರಾಣ ಪಾರಾಯಣದ ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬುಧವಾರ ಸಂಜೆ ನೂತನ ರಥೋತ್ಸವ ಜರುಗಿತು. ರಥಕ್ಕೆ ಎಲ್ಲರೂ ಉತ್ತತ್ತಿ ಎಸೆದು ಭಕ್ತಿ ಸಮರ್ಪಿಸಿದರು.

ಶಮಿ ವೃಕ್ಷಕ್ಕೆ ಪೂಜೆ: ಗ್ರಾಮದಲ್ಲಿ ದಸರಾ ಹಬ್ಬದ ಪ್ರಯುಕ್ತ ಗ್ರಾಮದ ಮಹಿಳೆಯರು ಒಂಬತ್ತು ದಿನಗಳ ಕಾಲ ಬೆಳಗಿನ ಜಾವ ಬ್ರಾಹ್ಮೀ ಮಹೂರ್ತದಲ್ಲಿ ಶಮಿ ವೃಕ್ಷಕ್ಕೆ ಪೂಜೆ ಸಲ್ಲಿಸಿ ಪ್ರದಕ್ಷಿಣೆ ಹಾಕಿದರು.

ಸಂಭ್ರಮದ ಆಯುಧ ಪೂಜೆ: ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಬುಧವಾರ ಆಯುಧ ಪೂಜೆ ಸಂಭ್ರಮದಿಂದ ಆಚರಿಸಲಾಯಿತು. ನವರಾತ್ರಿ ಅಂಗವಾಗಿ ಪಟ್ಟಣದ ಮಾರುಕಟ್ಟೆಯಲ್ಲಿ ವಿವಿಧ ಅಂಗಡಿಗಳಲ್ಲಿ ವ್ಯಾಪಾರ ಜೋರಾಗಿತ್ತು. ಜನರು ಹೂ, ಹಣ್ಣು, ಬಟ್ಟೆ ಸೇರಿದಂತೆ ಪೂಜಾ ಸಾಮಗ್ರಿಗಳ ಖರೀದಿಸಿದರು. ಬುಧವಾರ ಜನರು ತಮ್ಮ ವಾಹನ ಹಾಗೂ ಆಯುಧಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.