ಗದಗ: ಇಸ್ರೇಲ್, ಅಮೆರಿಕ, ಇರಾನ್ ಯುದ್ದ ಮುಗಿಯದ ಕಾರಣ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪೆಟ್ರೋಲ್, ಡೀಸೆಲ್ ಮಿತವ್ಯಯದ ಸಂದೇಶ ಕೊಟ್ಟಿದ್ದಾರೆ. ಕಾಂಗ್ರೆಸ್ ನವರಿಗೆ ತ್ಯಾಗ, ದೇಶ ಭಕ್ತಿ ಅನ್ನುವುದೇ ಗೊತ್ತಿಲ್ಲ. ವಿರೋಧ ಮಾಡುವುದರ ಸಲುವಾಗಿ ವಿರೋಧ ಮಾಡುತ್ತಾರೆ ಎಂದು ಗದಗ-ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಂತರರಾಷ್ಟ್ರೀಯ ಮಟ್ಟದಲ್ಲಿ ಯುದ್ದ ನಡೆಯುತ್ತಿದೆ. ಗಲ್ಫ್ ರಾಷ್ಟ್ರದ ಯುದ್ದ ಮುಗಿಯುವಂತೆ ಕಾಣುತ್ತಿಲ್ಲ. ಉಕ್ರೇನ್ ರಷ್ಯಾ ಯುದ್ದ ಆದಾಗ ಬಹಳಷ್ಟು ಸಮಸ್ಯೆ ಆಗಿತ್ತು. ರಸಗೊಬ್ಬರ ಕಚ್ಚಾವಸ್ತುಗಳ ಸಮಸ್ಯೆ ಆಗಿತ್ತು. ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ ಕೊಟ್ಟಿದ್ದಾರೆ ಎಂದರು.

ಜನರು ಬಂಗಾರ ಖರೀದಿ ಮಾಡುವುದರಿಂದ ವಿದೇಶಿ ತೆರಿಗೆ ಹೊಡೆತ ಬೀಳುತ್ತಿದೆ. ಹೀಗಾಗಿ ಒಂದು ವರ್ಷ ಬಂಗಾರ ಖರೀದಿ ನಿಲ್ಲಿಸದಿದ್ದರೆ ಏನೂ ಆಗುವುದಿಲ್ಲ. ಇನ್ನು ಪೆಟ್ರೋಲ್ ಡೀಸೆಲ್ ಮಿತವ್ಯಯವಾಗಿ ಬಳಕೆ ಮಾಡಬೇಕು. ರಸಗೊಬ್ಬರ ಬಳಕೆ ಕಡಿಮೆ ಮಾಡಿ ಸಾವಯವ ಗೊಬ್ಬರ ಬಳಕೆ ಮಾಡಿ ಎಂದಿದ್ದಾರೆ. ವಿದೇಶ ಪ್ರಯಾಣ ಸಹ ಕಡಿಮೆ ಮಾಡಬೇಕು ಎಂದಿದ್ದಾರೆ ದೇಶಕ್ಕಾಗಿ ಇಷ್ಟಾದರೂ ನಾವು ಮಾಡಬೇಕಿದೆ ಎಂದು ಹೇಳಿದರು.

ಈ ಹಿಂದೆ ಭಾರತ-ಪಾಕಿಸ್ತಾನ ಯುದ್ದ ಆದಾಗ ಆಹಾರ ಕೊರತೆ ಆಗಿತ್ತು. ಆಗಿನ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಒಂದು ದಿನ ಉಪವಾಸ ಮಾಡಿ ಎಂದಿದ್ದರು ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-23-1595477872

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.