ಮುಳಗುಂದ: ‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಜತೆಗೆ ಉತ್ತಮ ಸಂಸ್ಕಾರ ನೀಡಬೇಕು. ಮಕ್ಕಳನ್ನು ಸಮಾಜದ ಉತ್ತಮ ಪ್ರಜೆಗಳಾಗಿ ಮಾಡುವ ಕಾರ್ಯ ತಾಯಂದಿರ ಕೈಯಲ್ಲಿದೆ’ ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವಸಂತ ಉಲ್ಲತ್ತಿ ಹೇಳಿದರು.

ಇಲ್ಲಿನ ಬಾಲಲೀಲಾ ಮಹಾಂತ ಶಿವಯೋಗಿಗಳ ಗವಿಮಠದಲ್ಲಿ ಶನಿವಾರ ನಡೆದ ರಾಣಿ ಚನ್ನಮ್ಮ ಮಹಿಳಾ ಹಿತರಕ್ಷಣಾ ಟ್ರಸ್ಟ್ ಉದ್ಘಾಟನೆ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸಾನ್ನಿಧ್ಯ ವಹಿಸಿದ ನೀಲಗುಂದ ಪ್ರಭುಲಿಂಗ ದೇವರು ಮಾತನಾಡಿ, ‘ಜಗತ್ತಿನಲ್ಲಿ ಅತೀ ಶಕ್ತಿಶಾಲಿ ಎಂದರೆ ತಾಯಿ. ಮಹಿಳೆಯರು ಕುಟುಂಬ, ಶಿಕ್ಷಣ, ಆರೋಗ್ಯ, ರಾಜಕೀಯ, ವಿಜ್ಞಾನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಸಮಾಜದ ಸಮಗ್ರ ಅಭಿವೃದ್ಧಿಗೆ ಮಹಿಳೆಯರ ಸಬಲೀಕರಣ ಅಗತ್ಯವಾಗಿದ್ದು, ಅವರ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಬೇಕು’ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷೆ ಮಾಲಾದೇವಿ, ಮುಖಂಡ ರಾಮಣ್ಣ ಕಮಾಜಿ, ಮಂಗಳಾ ನೀಲಗುಂದ ಮಾತನಾಡಿದರು. ಪಂಚಮಸಾಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು. ರಾಣಿ ಚನ್ನಮ್ಮ ಮಹಿಳಾ ಹಿತರಕ್ಷಣಾ ಟ್ರಸ್ಟ್ ಅಧ್ಯಕ್ಷೆ ನಿರ್ಮಲಾ ಚಿಂಚಲಿ ಅಧ್ಯಕ್ಷತೆ ವಹಿಸಿದ್ದರು. ನೀಲಮ್ಮ ಬೋಳನವರ, ನಿವೃತ್ತ ಶಿಕ್ಷಕಿ ವಿ.ಬಿ. ಪಾಟೀಲ, ಮಂಗಳಾ ಶೋಭಾ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.