ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅರಸು ಭವನ’ ಕೊನೆಗೂ ಉದ್ಘಾಟನೆ

ಎಂಟು ತಿಂಗಳ ನಂತರ ಉದ್ಘಾಟನೆ ಭಾಗ್ಯ ಕಂಡ ಕಟ್ಟಡ
Last Updated 30 ಸೆಪ್ಟೆಂಬರ್ 2020, 4:34 IST
ಅಕ್ಷರ ಗಾತ್ರ

ಶಿರಹಟ್ಟಿ: ‘ಗ್ರಾಮೀಣ ಪ್ರದೇಶದ ಪ್ರತಿಭೆಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸಿಗುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಪಟ್ಟಣದ ಛಬ್ಬಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಅರಸು ಭವನ, ಇಂದಿರಾ ಕ್ಯಾಂಟಿನ್‌ ಮಂಗಳವಾರ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

‘ಅರಸು ಭವನ, ಇಂದಿರಾ ಕ್ಯಾಂಟಿನ್‌ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಕಾರಣಾಂತರಗಳಿಂದ ಉದ್ಘಾಟನೆಗೊಳ್ಳುವುದು ತಡವಾಯಿತು. ಇಲ್ಲಿ ದೊರೆಯುವ ಸೌಲಭ್ಯಗಳನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು’ ಎಂದು ಅವರು ಹೇಳಿದರು.

ಪಟ್ಟಣ ಪಂಚಾಯ್ತಿ ವತಿಯಿಂದ ಅಂಗವಿಕಲರಿಗೆ ನಾಲ್ಕು ದ್ವಿಚಕ್ರ ವಾಹನ ಗಳನ್ನು ಶಾಸಕ ಲಮಾಣಿ ಫಲಾನುಭವಿಗಳಿಗೆ ವಿತರಣೆ ಮಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ವಿಸ್ತಾರಣಾಧಿಕಾರಿ ರತ್ನಮ್ಮ ಹೊಸಮನಿ, ತಹಶೀಲ್ದಾರ್ ಯಲ್ಲಪ್ಪ ಗೊಣೆಣ್ಣವರ, ತಾಲ್ಲೂಕು ವಿಸ್ತರಣಾಧಿಕಾರಿ ಬಸವರಾಜ ಬಳ್ಳಾರಿ, ಜಿಪಂ ಮಾಜಿ‌ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ಫಕ್ಕಿರೇಶ ರಟ್ಟಿಹಳ್ಳಿ, ದೇವಪ್ಪ ಲಮಾಣಿ, ತಿಪ್ಪಣ್ಣ ಕೊಂಚಿಗೇರಿ, ರೇಖಾ ಅಳವಂಡಿ, ನಾಗರಾಜ ಲಕ್ಕುಂಡಿ, ಜಾನು ಲಮಾಣಿ, ಪರಮೇಶ ಪರಬ, ಸಿ.ಸಿ.ನೂರಶೆಟ್ಟರ, ರಾಮಣ್ಣ ಡಂಬಳ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT