ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಭೀತಿ: ಸರಳ ಆಚರಣೆಗೆ ನಿರ್ಧಾರ

ಅ.8ರಂದು ಹಿರಿಯ ನಾಗರಿಕರ ದಿನಾಚರಣೆ: ಪೂರ್ವಭಾವಿ ಸಭೆ
Last Updated 29 ಸೆಪ್ಟೆಂಬರ್ 2020, 8:14 IST
ಅಕ್ಷರ ಗಾತ್ರ

ಗದಗ: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 8ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲಾಡಳಿತ ಭವನದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ನಡೆದ ವಿಶ್ವ ನಾಗರಿಕರ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಸರ್ಕಾರದ ನಿರ್ದೇಶನದಂತೆ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸರ್ ಬಳಕೆ, ಸುರಕ್ಷಿತ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್‌ ಮಾರ್ಗಸೂಚಿಗಳನ್ನು ಪಾಲಿಸಬೇಕು. ಹಿರಿಯ ನಾಗರಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ, ಉಟೋಪಚಾರ, ಉಪನ್ಯಾಸ ಕಾರ್ಯಕ್ರಮ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಎ., ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕುರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರೂಪಣಾಧಿಕಾರಿ ಎಚ್.ಎಚ್.ಕುಕನೂರ, ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಪ್ರೋಬಸ್ ಕ್ಲಬ್, ಜಿಲ್ಲಾ ನಿವೃತ್ತರ ಸಂಘದ ಪದಾಧಿಕಾರಿಗಳು, ಶಾಂತಿಧಾಮ ವೃದ್ಧಾಶ್ರಮ, ಜೀವನ ಜ್ಯೋತಿ ಸೇವಾ ಸಂಸ್ಥೆ, ಸುರಭಿ ವೃದ್ಧಾಶ್ರಮದ ಪ್ರತಿನಿಧಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT