ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗದಲ್ಲಿ ರಂಗೇರಲಿದೆ ಗ್ರಾ.ಪಂ ಚುನಾವಣೆ ಕಣ

ಜಿಲ್ಲೆಯ 117 ಗ್ರಾಮ ಪಂಚಾಯ್ತಿಗಳ 1,696 ಸ್ಥಾನಗಳಿಗೆ ಚುನಾವಣೆ ಘೋಷಣೆ
Last Updated 2 ಡಿಸೆಂಬರ್ 2020, 2:16 IST
ಅಕ್ಷರ ಗಾತ್ರ

ಗದಗ: ‘ಜಿಲ್ಲೆಯ 117 ಗ್ರಾಮ ಪಂಚಾಯ್ತಿಗಳ 1,696 ಸ್ಥಾನಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಪಟ್ಟಣ ಪಂಚಾಯ್ತಿ, ಪುರಸಭೆ, ನಗರಸಭೆ ವ್ಯಾಪ್ತಿ ಹೊರತುಪಡಿಸಿ ಉಳಿದೆಡೆ. ಡಿ.31ರವರೆಗೆ‌ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿ, ‘ಮೊದಲನೇ ಹಂತದಲ್ಲಿ ಗದಗ, ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಎರಡನೇ ಹಂತದಲ್ಲಿ ಮುಂಡರಗಿ, ರೋಣ, ಗಜೇಂದ್ರಗಡ ಹಾಗೂ ನರಗುಂದ ತಾಲ್ಲೂಕುಗಳಲ್ಲಿ ಚುನಾವಣೆ ನಡೆಯಲಿದ್ದು, ಪಾರದರ್ಶಕವಾಗಿ ಮತ್ತು ಕಟ್ಟುನಿಟ್ಟಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಒಟ್ಟು 122 ಗ್ರಾಮ ಪಂಚಾಯ್ತಿಗಳಿದ್ದು, ಅದರಲ್ಲಿ ಲಕ್ಷ್ಮೇಶ್ವರ ತಾಲ್ಲೂಕಿನ ಬಟ್ಟೂರು, ಗದಗ ತಾಲ್ಲೂಕಿನ ಹರ್ಲಾಪೂರ, ಗಜೇಂದ್ರಗಡ ತಾಲ್ಲೂಕಿನ ಶಾಂತಗೇರಿ ಹಾಗೂ ಕುಂಟೋಜಿ, ಮುಂಡರಗಿ ತಾಲ್ಲೂಕಿನ ಮುರಡಿ ತಾಂಡ ಗ್ರಾಮ ಪಂಚಾಯ್ತಿಗಳ ಅಧಿಕಾರವಧಿ ಇನ್ನೂ ಮುಗಿದಿಲ್ಲ’ ಎಂದು ತಿಳಿಸಿದರು.

‘ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಮೊದಲ ಹಂತದ ಚುನಾವಣೆಗೆ ಡಿ.7ರಂದು ಅಧಿಸೂಚನೆ ಹೊರಡಿಸಲಾಗುವುದು. ಡಿ.11 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.12ರಂದು ನಾಮಪತ್ರಗಳ ಪರಿಶೀಲನೆ, ಡಿ.14 ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನ. ಡಿ.22ರಂದು ಮತದಾನ ನಡೆಯಲಿದ್ದು, ಡಿ.30ರಂದು ಬೆಳಿಗ್ಗೆ 8ರಿಂದ ಸಂಬಂಧಿಸಿದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ’ ಎಂದು ಹೇಳಿದರು.

‘ಎರಡನೇ ಹಂತದ ಚುನಾವಣೆಗೆ ಡಿ.11ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆಡಿ.16ರಂದು ಕೊನೆಯ ದಿನ. ಡಿ.17ರಂದು ನಾಮಪತ್ರಗಳ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಡಿ.19 ಕೊನೆಯ ದಿನ. ಡಿ.27ರಂದು ಮತದಾನ ನಡೆಯಲಿದೆ. ಡಿ.30ರಂದು ಬೆಳಿಗ್ಗೆ 8 ಗಂಟೆಯಿಂದ ಸಂಬಂಧಿಸಿದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಡಿ.31ಕ್ಕೆ ಮುಕ್ತಾಯವಾಗಲಿದೆ’ ಎಂದು ಹೇಳಿದರು.

‘ಚುನಾವಣೆ ನಡೆಯುವ ಗ್ರಾಮ ಪಂಚಾಯ್ತಿಗಳ ಪೈಕಿ ಜಿಲ್ಲೆಯಲ್ಲಿ ಒಟ್ಟು 5,34,085 ಮತದಾರರು ಇದ್ದಾರೆ. ಈ ಪೈಕಿ 2,70,245 ಪುರುಷರು ಹಾಗೂ 2,63,840 ಮಹಿಳಾ ಮತದಾರರು ಇದ್ದಾರೆ. ಚುನಾವಣೆ ನಡೆಯಲಿರುವ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ’ ಎಂದು ಹೇಳಿದರು.

ಮೊದಲನೇ ಹಂತದಲ್ಲಿ ಗದಗ ತಾಲ್ಲೂಕಿನಲ್ಲಿ ಒಟ್ಟು 26 ಗ್ರಾಮ ಪಂಚಾಯ್ತಿಗಳ ಪೈಕಿ 146 ಚುನಾವಣಾ ಕ್ಷೇತ್ರಗಳಿರುತ್ತವೆ. ಲಕ್ಷ್ಮೇಶ್ವರ ತಾಲ್ಲೂಕಿನಲ್ಲಿ ಒಟ್ಟು 13 ಗ್ರಾಮ ಪಂಚಾಯ್ತಿಗಳ ಪೈಕಿ 61 ಚುನಾವಣಾ ಕ್ಷೇತ್ರಗಳು, ಶಿರಹಟ್ಟಿ ತಾಲ್ಲೂಕಿನಲ್ಲಿ ಒಟ್ಟು 14 ಗ್ರಾಮ ಪಂಚಾಯ್ತಿಗಳ ಪೈಕಿ 75 ಚುನಾವಣಾ ಕ್ಷೇತ್ರಗಳು ಸೇರಿದಂತೆ ಒಟ್ಟು 53 ಗ್ರಾಮ ಪಂಚಾಯ್ತಿಗಳಲ್ಲಿ 282 ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಹೇಳಿದರು.

ಎರಡನೇ ಹಂತದ ತಾಲ್ಲೂಕುಗಳಾದ ಮುಂಡರಗಿ ತಾಲ್ಲೂಕಿನಲ್ಲಿ ಒಟ್ಟು 18 ಗ್ರಾಮ ಪಂಚಾಯ್ತಿಗಳ ಪೈಕಿ 95 ಚುನಾವಣಾ ಕ್ಷೇತ್ರಗಳು, ರೋಣ ತಾಲ್ಲೂಕಿನಲ್ಲಿ ಒಟ್ಟು 24 ಗ್ರಾಮ ಪಂಚಾಯ್ತಿಗಳ ಪೈಕಿ 120 ಚುನಾವಣಾ ಕ್ಷೇತ್ರಗಳು, ಗಜೇಂದ್ರಗಡ ತಾಲ್ಲೂಕಿನಲ್ಲಿ ಒಟ್ಟು 9 ಗ್ರಾಮ ಪಂಚಾಯ್ತಿಗಳ ಪೈಕಿ 49 ಕ್ಷೇತ್ರಗಳು ಹಾಗೂ ನರಗುಂದ ತಾಲ್ಲೂಕಿನಲ್ಲಿ 13 ಗ್ರಾಮ ಪಂಚಾಯ್ತಿಗಳ ಪೈಕಿ 56 ಚುನಾವಣಾ ಕ್ಷೇತ್ರಗಳು ಹೀಗೆ ಒಟ್ಟು 64 ಗ್ರಾಮ ಪಂಚಾಯ್ತಿಗಳಲ್ಲಿ 320 ಕ್ಷೇತ್ರಗಳಿಗೆ ಚುನಾವಣೆ ನಡೆಸಲಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್., ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ ಇದ್ದರು.

‘805 ಮತಗಟ್ಟೆಗಳ ಸ್ಥಾಪನೆ’

ಜಿಲ್ಲೆಯಲ್ಲಿ ಚುನಾವಣೆ ನಡೆಯುತ್ತಿರುವ ಗ್ರಾಮ ಪಂಚಾಯ್ತಿಗಳಲ್ಲಿ ಒಟ್ಟು 1,696 ಸದಸ್ಯ ಸ್ಥಾನಗಳಿಗೆ ಚುನಾವಣೆ ಜರುಗುತ್ತಿದ್ದು, ಈ ಪೈಕಿ 817 ಸಾಮಾನ್ಯ ವರ್ಗಕ್ಕೆ (ಮೀಸಲು ಸ್ಥಾನಗಳನ್ನು ಒಳಗೊಂಡಂತೆ) ಹಾಗೂ 879 ಮಹಿಳೆಯರಿಗಾಗಿ ಮೀಸಲಿರಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದರು.

ಗ್ರಾಮ ಪಂಚಾಯ್ತಿಗಳ ಚುನಾವಣೆ ನಡೆಸಲು ಒಟ್ಟು 805 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು ಈ ಪೈಕಿ 621 ಮುಖ್ಯ ಮತಗಟ್ಟೆಗಳು ಹಾಗೂ 184 ಹೆಚ್ಚುವರಿ ಮತಗಟ್ಟೆಗಳು ಇರುತ್ತವೆ. ಚುನಾವಣೆ ನಡೆಸಲು 117 ಗ್ರಾಮ ಪಂಚಾಯ್ತಿಗಳಿಗೆ ಒಟ್ಟು 117 ಚುನಾವಣಾಧಿಕಾರಿಗಳು ಹಾಗೂ 122 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದ್ದು, ತರಬೇತಿ ನೀಡಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT