ಬುಧವಾರ, ಜನವರಿ 26, 2022
26 °C

ಗದಗ-ಬೆಟಗೇರಿ ನಗರಸಭೆಗೆ ಚುನಾವಣೆ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ರಾಜ್ಯ ಚುನಾವಣಾ ಆಯೋಗವು ಗದಗ ಬೆಟಗೇರಿ ನಗರಸಭೆಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ್ದು, ಡಿ.27ರಂದು ಎಲ್ಲ 35 ವಾರ್ಡ್‌ಗಳಿಗೆ ಮತದಾನ ನಡೆಯಲಿದೆ.

ಡಿ.8ರಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದು, ಡಿ.15 ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದೆ. ಡಿ.16ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.18 ನಾಮಪತ್ರ ಹಿಂಪಡೆಯಲು ಕಡೆದಿನವಾಗಿದೆ. ಡಿ.27ರಂದು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಅಗತ್ಯವಿದ್ದ ಕಡೆಗಳಲ್ಲಿ ಡಿ. 29ರಂದು ಮರು ಮತದಾನ ನಡೆಯಲಿದೆ. ಡಿ.30ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಿಸುವಂತೆ ಚುನಾವಣಾ ಆಯೋಗ ಸೂಚಿಸಿದೆ.

ಡಿ.8ರಿಂದ 30ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರಲಿದ್ದು, ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ತಲಾ ₹ 2 ಲಕ್ಷ ವೆಚ್ಚ ಮಿತಿ ನಿಗದಿಪಡಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು