ಶುಕ್ರವಾರ, ಸೆಪ್ಟೆಂಬರ್ 24, 2021
21 °C
ಅಭಿಮಾನಿಯಿಂದ ಎಚ್‌ಕೆಪಿ ಪರ ಬರಹ

ಫೇಸ್‌ಬುಕ್‌ ಪೋಸ್ಟ್‌ ವೈರಲ್‌: ಎಚ್.ಕೆ. ಪಾಟೀಲ ಸಿಎಂ ಸ್ಥಾನಕ್ಕೆ ಅಭ್ಯರ್ಥಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಕಾಂಗ್ರೆಸ್‌ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಚರ್ಚೆ ಜೋರಾಗಿ ನಡೆದಿದ್ದು, ಅಭಿಮಾನಿಗಳು ನಮ್ಮ ನಾಯಕನೇ ಮುಂದಿನ ಸಿಎಂ ಎಂದು ಎಲ್ಲೆಡೆ ಪ್ರಚಾರ ಮಾಡುತ್ತಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬೆಂಬಲಿಗರು ತಮ್ಮ ನಾಯಕರ ಪರವಾಗಿ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ. ಈ ನಡುವೆ ಹಿರಿಯ ರಾಜಕಾರಣಿ, ಗದಗ ಶಾಸಕ ಎಚ್‌.ಕೆ. ಪಾಟೀಲ ಅವರು ಕೂಡ ಮುಂದಿನ ಸಿಎಂ ಅಭ್ಯರ್ಥಿ ಎಂದು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪೋಸ್ಟ್‌ ವೈರಲ್‌ ಆಗಿದೆ. 

‘ಕರ್ನಾಟಕದ ಸಂಭಾವಿತ ರಾಜಕಾರಣಿಗಳಲ್ಲಿ ಎಚ್‌.ಕೆ. ಪಾಟೀಲ ಕೂಡ ಒಬ್ಬರು. ರಾಜಕಾರಣದಲ್ಲಿ ಸುದೀರ್ಘ ಕಾಲ ಕಾರ್ಯನಿರ್ವಹಿಸಿ ತಮ್ಮ ಹೆಜ್ಜೆ ಗುರುತುಗಳನ್ನು ಮೂಡಿಸಿದ್ದಾರೆ. 1985ರ ವಿಧಾನಸಭೆ ಚುನಾವಣೆಯಲ್ಲಿ ಕೆ.ಎಚ್‌. ಪಾಟೀಲ ಅವರು ಪ್ರದೇಶ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾಗಿ ಭಾವಿ ಮುಖ್ಯಮಂತ್ರಿ ಎಂದೇ ಬಿಂಬಿತಗೊಂಡಿದ್ದರು. ಆದರೆ, ಅದೃಷ್ಟ ಒದಗಿಬರಲಿಲ್ಲ. ತಂದೆಯ ಬಯಕೆಯನ್ನು ಮಗ ಎಚ್‌.ಕೆ. ಪಾಟೀಲ ಮುಖ್ಯಮಂತ್ರಿಯಾಗಿ ಈಡೇರಿಸಬಲ್ಲರು ಎಂಬ ನಂಬಿಕೆ ಬಹಳಷ್ಟು ಮಂದಿಗೆ ಇದೆ’ ಎಂದು ಶಿವರಾಜ್‌ ಕೋಟಿ ಎಂಬುವರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

‘ಅಭಿವೃದ್ಧಿಯ ದೃಷ್ಟಿಕೋನದಲ್ಲಿ ರಾಜಕಾರಣವನ್ನು ನೋಡುವ ಎಚ್‌.ಕೆ. ಪಾಟೀಲ ಅವರ ಟೀಕೆ ಟಿಪ್ಪಣಿಗಳು ರಚನಾತ್ಮಕವಾಗಿರುತ್ತವೆ. ಗ್ರಾಮ ಸ್ವರಾಜ್ಯದ ಪರಿಕಲ್ಪನೆಗೆ ಬದ್ಧರಾಗಿರುವ, ಮಾತಿನಂತೆ ತಮ್ಮ ನೀತಿ ನಿಲುವುಗಳನ್ನು ಪ್ರತಿಪಾದಿಸುವ ಎಚ್.ಕೆ. ಪಾಟೀಲ ಈಗಿನ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಒಬ್ಬ ಅಭ್ಯರ್ಥಿ’ ಎಂದು ಶಿವರಾಜ್‌ ತಮ್ಮ ಪೋಸ್ಟ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಕಾಂಗ್ರೆಸ್‌ ಪಕ್ಷದಲ್ಲಿ ಮುಂದಿನ ಸಿಎಂ ಯಾರು ಎಂಬ ಕುರಿತ ಚರ್ಚೆಯನ್ನು ಮಾಡದಂತೆ ಹೈಕಮಾಂಡ್‌ ಸ್ಪಷ್ಟ ಸೂಚನೆ ನೀಡಿದೆ. ನಾನು ಕೂಡ ಸಿಎಂ ಅಭ್ಯರ್ಥಿ ಎಂದು ಅಭಿಮಾನಿಯೊಬ್ಬರು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವುದು ಅದು ಅವರ ವೈಯಕ್ತಿಕ ಅಭಿಪ್ರಾಯ. ಯಾರ ಅಭಿಮಾನದ ಮಾತುಗಳನ್ನು ಕಾಂಗ್ರೆಸ್‌ ಪ್ರೋತ್ಸಾಹಿಸುವುದಿಲ್ಲ’ ಎಂದು ಶಾಸಕ ಎಚ್‌.ಕೆ.ಪಾಟೀಲ ಅವರು ಪ್ರತಿಕ್ರಿಯಿಸಿದರು.


ವೈರಲ್ ಆದ ಫೇಸ್‌ಬುಕ್ ಪೋಸ್ಟ್ 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು