ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ: ಐಕ್ಯ ಮಂಟಪ ಲೋಕಾರ್ಪಣೆ, ಜಾತ್ರೆಗೆ ಚಾಲನೆ

ನಾಳೆಯಿಂದ ತೋಂಟದಾರ್ಯ ಜಾತ್ರಾ ಮಹೋತ್ಸವ ಸಂಭ್ರಮ
Last Updated 15 ಏಪ್ರಿಲ್ 2022, 4:48 IST
ಅಕ್ಷರ ಗಾತ್ರ

ಗದಗ: ಉತ್ತರ ಕರ್ನಾಟಕದ ಐತಿಹಾಸಿಕ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವ ಏ.15ರಿಂದ ಏ.18ರವರೆಗೆ ಅದ್ಧೂರಿಯಾಗಿ ನಡೆಯಲಿದೆ ಎಂದು ತೋಂಟದಾರ್ಯ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಅಮರೇಶ ಅಂಗಡಿ ತಿಳಿಸಿದರು.

ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಕೊರೊನಾ ಕಾರಣದಿಂದಾಗಿ ಎರಡು ವರ್ಷಗಳ ಕಾಲ ಜಾತ್ರೆಯನ್ನು ಸಾಂಕೇತಿಕವಾಗಿ ಆಚರಿಸಲಾಗಿತ್ತು. ಈ ವರ್ಷ ಕೋವಿಡ್‌–19 ಭೀತಿ ತಗ್ಗಿರುವುದರಿಂದ ಹಿಂದೆ ನಡೆಸಿದಂತೆ ಜಾತ್ರೆಯನ್ನು ಅದ್ಧೂರಿಯಾಗಿ ಆಚರಿಸಲಾಗುವುದು’ ಎಂದು ಹೇಳಿದರು.

‘ಗದುಗಿನ ತೋಂಟದಾರ್ಯ ಮಠ ಭಾವೈಕ್ಯತೆಗೆ ಹೆಸರುವಾಸಿಯಾಗಿದೆ. ಹಿಂದಿನಿಂದ ನಡೆದುಕೊಂಡಿರುವ ಪರಂಪರೆಯಂತೆ ಎಲ್ಲರನ್ನೂ ಒಳಗೊಳ್ಳುವ ಮೂಲಕ ಈ ಬಾರಿಯ ಜಾತ್ರೆಯನ್ನು ಆಚರಿಸಲಾಗುವುದು’ ಎಂದು ಅವರು ತಿಳಿಸಿದರು.

‘ಏ.15ರಂದು ಬೆಳಿಗ್ಗೆ 10.30ಕ್ಕೆ ಜಾತ್ರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ದೊರಕಲಿದೆ. ಕನ್ನಡದ ಕುಲಗುರು, ಲಿಂಗೈಕ್ಯ ಡಾ.ತೋಂಟದ ಸಿದ್ಧಲಿಂಗ ಸ್ವಾಮೀಜಿ ಅವರ ‘ಐಕ್ಯ ಮಂಟಪ’ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೆರವೇರಿಸುವರು’ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದ ಸಾನ್ನಿಧ್ಯವನ್ನು ಹುಬ್ಬಳ್ಳಿ-ಹಾನಗಲ್ ಮೂರು ಸಾವಿರ ಮಠದ ಪೀಠಾಧಿಪತಿ ಜಗದ್ಗುರು ಡಾ.ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ವಹಿಸುವರು. ಸಮ್ಮುಖ ವನ್ನು ಅರಭಾವಿಯ ದುರದುಂಡೀಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ, ಮುಂಡರಗಿ- ಬೈಲೂರು ತೋಂಟದಾರ್ಯ ಶಾಖಾಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಶಿರೋಳ ತೋಂಟದಾರ್ಯ ಶಾಖಾಮಠದ ಗುರುಬಸವ ಸ್ವಾಮೀಜಿ, ಭೈರನಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ವಹಿಸುವರು. ಐಕ್ಯಮಂಟಪದ ಶಿಲ್ಪಿಗಳಾದ ಶಂಕರ ಸ್ತಪತಿ ಅವರನ್ನು ಸನ್ಮಾನಿಸಲಾಗುವುದು’ ಎಂದು ತಿಳಿಸಿದರು.

ಸಂಜೆ 7.30ಕ್ಕೆ ಪುಸ್ತಕೋತ್ಸವ ನಡೆಯಲಿದ್ದು, ಕಾರ್ಯಕ್ರಮದ ಸಾನ್ನಿಧ್ಯವನ್ನು ಶಿವಾನಂದ ಬೃಹನ್ಮಠದ ಸದಾಶಿವಾನಂದ ಭಾರತೀ ಸ್ವಾಮೀಜಿ, ತೋಂಟದ ಸಿದ್ಧರಾಮ ಸ್ವಾಮೀಜಿ ವಹಿಸುವರು. ಸಮ್ಮುಖವನ್ನು ಸಂಡೂರು ವಿರಕ್ತಮಠದ ಪ್ರಭು ಸ್ವಾಮೀಜಿ, ಭಾಲ್ಕಿ ಸಂಸ್ಥಾನ ಹಿರೇಮಠದ ಗುರುಬಸವ ಪಟ್ಟದ್ದೇವರು, ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ ವಹಿಸುವರು ಎಂದು ತಿಳಿಸಿದರು.

ಡಾ.ಎಂ.ಎಂ. ಕಲಬುರ್ಗಿ ಅಧ್ಯಯನ ಸಂಸ್ಥೆಯಿಂದ ಬಿಡುಗಡೆಯಾಗುವ ಪ್ರಾಚೀ ನ, ನೂತನ, ಅನುವಾದ ಮಾಲೆಯ ಹಾಗೂ ಪುಣ್ಯಪುರುಷ ಮಾಲೆಯ ಕೃತಿಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಎಂ.ಎನ್.ನಂದೀಶ ಹಂಚೆ ಬಿಡುಗಡೆಗೊಳಿಸುವರು. ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಉಪನ್ಯಾಸಕ ಡಾ.ರಮೇಶ ಕಲ್ಲನ ಗೌಡರ ಬಿಡುಗಡೆಗೊಳ್ಳಲಿರುವ ಗ್ರಂಥಗಳನ್ನು ಪರಿಚಯಿಸುವರು ಎಂದು ತಿಳಿಸಿದರು.

ಏ.16ರಂದು ಸಂಜೆ 6.30ಕ್ಕೆ ಮಹಾರಥೋತ್ಸವ ನೆರವೇರಲಿದ್ದು, ಸಂಜೆ 4ಕ್ಕೆ ಎಸ್.ಎಸ್ ಕಳಸಾಪೂರ ಶೆಟ್ಟರ್ ಮನೆಯಿಂದ ಮೆರವಣಿಗೆ ಮೂಲಕ ಶ್ರೀಗಳು ಮೂಲಕ ಬರುವರು. ರಾತ್ರಿ 7.30ಕ್ಕೆ ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ವಿಜಯಪುರದ ಷಣ್ಮುಖಾರೂಢಮಠದ ಅಭಿನವ ಸಿದ್ಧಾರೂಢ ಸ್ವಾಮೀಜಿ, ತೋಂಟದ ಸಿದ್ಧರಾಮ ಸ್ವಾಮೀಜಿ ವಹಿಸುವರು. ಧಾರವಾಡ-ಮುಳಗುಂದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಶರಣ ಸಾಹಿತಿಗಳಾದ ಆರ್.ಎಂ.ಕರಡಿಗುದ್ದಿ ಅವರನ್ನು ಸನ್ಮಾನಿಸಲಾಗುವುದು. ಧಾರವಾಡದ ರತಿಕಾ ನೃತ್ಯ ಕಲಾ ನಿಕೇತನ ಸಂಸ್ಥೆಯ ನಾಗರತ್ನ ಹಡಗಲಿ ಅವರಿಂದ ವಚನ ನೃತ್ಯ ವೈಭವ ನೆರವೇರುವುದು’ ಎಂದು ಹೇಳಿದರು.

‘ಏ.17ರಂದು ಸಂಜೆ 6.30ಕ್ಕೆ ಲಘು ರಥೋತ್ಸವ ನಡೆಯಲಿದ್ದು, ಸಂಜೆ ನಾಲ್ಕು ಗಂಟೆಗೆ ಬಸವೇಶ್ವರ ನಗರದ ಕುಬಸದ ಬಂಧುಗಳ ಮನೆಯಿಂದ ಮೆರವಣಿಗೆ ಮೂಲಕ ಶ್ರೀಮಠಕ್ಕೆ ತೋಂಟದ ಸಿದ್ಧರಾಮ ಸ್ವಾಮೀಜಿ ಬರುವರು. ಲಘುರಥೋತ್ಸವದ ಬಳಿಕ 7.30ಕ್ಕೆ ಮಹಿಳಾಗೋಷ್ಠಿ ನಡೆಯಲಿದೆ. ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಡಾ.ಗಂಗಾದೇವಿ ಮಾತಾಜೀ, ಬಸವಲಿಂಗ ಸ್ವಾಮೀಜಿ ಸಾನ್ನಿಧ್ಯವಹಿಸುವರು ಎಂದು ತಿಳಿಸಿದರು.

ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಚಿವರಾದ ಲೀಲಾದೇವಿ ಪ್ರಸಾದ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ ಭಾಗವಹಿಸುವರು. ಕಾಳಿದಾಸ ಸಮ್ಮಾನ್‌ ಪ್ರಶಸ್ತಿ ಪುರಸ್ಕೃತ ಪಂ.ಡಾ.ಎಂ ವೆಂಕಟೇಶಕುಮಾರ ಅವರನ್ನು ಸನ್ಮಾನಿಸಲಾಗುವುದು.

ಏ.18ರಂದು ಬೆಳಿಗ್ಗೆ 10.30ಕ್ಕೆ ಪರಿಸರೋತ್ಸವ ಹಾಗೂ ಸಂತ ಸೇವಾಲಾಲ ಗ್ರಂಥ ಲೋಕಾರ್ಪಣೆಗೊಳ್ಳಲಿದೆ. ಕಾರ್ಯಕ್ರಮದ ಸಾನ್ನಿಧ್ಯವನ್ನು ತೋಂಟದ ಸಿದ್ಧರಾಮ ಸ್ವಾಮೀಜಿ ವಹಿಸುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಮಣ್ಣ ಬ್ಯಾಟಿ ವಿರಚಿತ ‘ಸಂತ ಸೇವಾ ಲಾಲ ಪುರಾಣ’ ಗ್ರಂಥ ಬಿಡುಗಡೆಗೊಳ್ಳುವುದು. ಮಹಾರಾಷ್ಟ್ರದ ಪೌರಾದೇವಿ ಕ್ಷೇತ್ರದ ಪೀಠಾಧಿಪತಿಗಳಾದ ಬಾಬುಸಿಂಗ್ ಮಹಾರಾಜರು ಗ್ರಂಥ ಬಿಡುಗಡೆಗೊಳಿಸುವರು ಎಂದು ತಿಳಿಸಿದರು.

ಸಚಿವ ಪ್ರಭು ಚವ್ಹಾಣ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಮಾಜಿ ಶಾಸಕರಾದ ಡಿ.ಆರ್.ಪಾಟೀಲ, ಜಿ.ಎಸ್.ಗಡ್ಡದ್ದೇವರಮಠ, ಜಿ.ಎಸ್.ಪಾಟೀಲ, ಬಿ.ಆರ್.ಯಾವಗಲ್, ಮಹಾರಾಷ್ಟ್ರ ರಾಷ್ಟ್ರೀಯ ಗೋರಸೇನಾ ಅಧ್ಯಕ್ಷ ಅರುಣ ಚವ್ಹಾಣ, ಗೋರಸೇನಾ ರಾಜ್ಯ ಘಟಕದ ಅಧ್ಯಕ್ಷ ರವಿಕಾಂತ ಅಂಗಡಿ ಭಾಗವಹಿಸುವರು.

ಸಂಜೆ 7.30ಕ್ಕೆ ಮಂಗಲೋತ್ಸವ ನೆರವೇರಲಿದ್ದು, ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಹಾಸ್ಯ ಕಲಾವಿದ ಗಂಗಾವತಿ ಪ್ರಾಣೇಶ ಅವರಿಂದ ಸಾಂಸ್ಕೃತಿ ಕಾರ್ಯಕ್ರಮ ನಡೆಯಲಿವೆ ಎಂದರು.

ಜಾತ್ರಾ ಸಮಿತಿ ಉಪಾಧ್ಯಕ್ಷರಾದ ದಾನಯ್ಯ ಗಣಾಚಾರಿ, ಮೈಲಾರಪ್ಪ ಅರಣಿ, ಕಾರ್ಯದರ್ಶಿ ಕೊಟ್ರೇಶ ಮೆಣಸಿನ ಕಾಯಿ, ಮಲ್ಲಿಕಾರ್ಜುನ ಚಂದಪ್ಪನವರ, ಕಿರಣ ತಿಪ್ಪಣ್ಣವರ, ಅಶೋಕ ಕುಡತಿನ್ನಿ, ಕೋಶಾಧ್ಯಕ್ಷ ವೀರಣ್ಣ ಜ್ಯೋತಿ, ಸುರೇಶ ಮರಳಪ್ಪನವರ, ಮುರುಘ ರಾಜೇಂದ್ರ ಬಡ್ನಿ, ಗದಗ ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಎಂ.ಸಿ.ಐಲಿ, ಪ್ರಚಾರ ಸಮಿತಿ ಉಪಾಧ್ಯಕ್ಷ ವೀರೇಶ ಎಂ. ಹರ್ಲಾಪೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT