ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ವಿರೋಧಿ ಕಾನೂನು ಕೈಬಿಡಲು ಆಗ್ರಹ

Last Updated 26 ಜನವರಿ 2021, 16:26 IST
ಅಕ್ಷರ ಗಾತ್ರ

ಗದಗ: ‘ದೇಶದ ಬೆನ್ನೆಲುಬು ರೈತ ಎಂದು ಹೇಳುತ್ತಲೇ ಎಲ್ಲ ಸರ್ಕಾರಗಳು ರೈತರ ಬೆನ್ನಿಗೆ ಚೂರಿ ಹಾಕಿವೆ’ ಎಂದು ಅಖಿಲ ಕರ್ನಾಟಕ ನೆಲ ಜಲ ಪರಿಸರ ಸಂರಕ್ಷಣಾ ವೇದಿಕೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬಸವರಾಜ ದೇಸಾಯಿ ಆರೋಪಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಪಿಎಂಸಿ ಕಾಯ್ದೆ, ಭೂಸುಧಾರಣೆ ಕಾಯ್ದೆ, ವಿದ್ಯುತ್ ಉದಾರೀಕರಣ ಖಾಸಗೀಕರಣದ ಮೂಲಕ ರೈತರನ್ನು ಬೀದಿ ಪಾಲು ಮಾಡಲು ಹೊರಟಿದೆ. ಇದು ಖಂಡನಾರ್ಹ’ ಎಂದರು.

ದಾವಲ್ ಎಂ.ಮುಳಗುಂದ, ಎಲ್.ನಾರಾಯಣಸ್ವಾಮಿ, ದಾವಲಸಾಬ ಬಿ. ಉಮಚಗಿ, ಬಕ್ಷಿ ಪಿಂಜಾರ, ಪರಶುರಾಮ ಬನ್ನೂರ, ಸಿಕಂದರ ಸೊನ್ನದ, ಸಮೀರ ಕುನ್ನಿಬಾವಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT